ಸೀತಾಪುರ್(ಉತ್ತರ ಪ್ರದೇಶ): 11 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತರು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಂಪುರ ಕಲಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಸೀತಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಲಕಿ ಆಡುಗಳನ್ನು ಮೇಯಿಸಲು ಇಟ್ಟಿಗೆ ಗೂಡು ಬಳಿ ಹೋದಾಗ ಅಲ್ಲೇ ಇದ್ದ ಬಾಲಕರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಬಾಲಕಿ ಘಟನೆಯನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.
ನಂತರ ಆಕೆಯ ತಾಯಿ ಪೊಲೀಸ್ ಠಾಣೆಗೆ ಬಂದು ನೀಡಿದ ದೂರಿನ ಆಧಾರದ ಮೇಲೆ, ಮೂವರು ಬಾಲಕರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ಡಿಬಿ (12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಲ್ಲಾ ಆರೋಪಿಗಳೆಲ್ಲರೂ 15 ವರ್ಷ ವಯಸ್ಸಿನವರಾಗಿದ್ದಾರೆ. ಆಂತರಿಕ ರಕ್ತಸ್ರಾವದಿಂದಾಗಿ ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಸಿಧೌಲಿ ಸರ್ಕಲ್ ಇನ್ಸ್ಪೆಕ್ಟರ್ ಅಲೋಕ್ ಪ್ರಸಾದ್ ಪ್ರತಿಕ್ರಿಯಿಸಿ, ಬಾಲಕಿಯ ಮೇಲೆ ಮೂವರು ಅಪ್ರಾಪ್ತರು ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಆಕೆಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದ್ದೆ ಎಂದು ತಿಳಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.