ಮನೆ ಕಾನೂನು ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್​ ಗೆ ಅರವಿಂದ್ ಕೇಜ್ರಿವಾಲ್ ಮನವಿ

ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್​ ಗೆ ಅರವಿಂದ್ ಕೇಜ್ರಿವಾಲ್ ಮನವಿ

0

ಮಧ್ಯಂತರ ಜಾಮೀನು ಅವಧಿ 7 ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ​ಗೆ ಮನವಿ ಮಾಡಿದ್ದಾರೆ.

Join Our Whatsapp Group

ಅಬಕಾರಿ ನೀತಿ ಹಗರಣದಲ್ಲಿ ಪ್ರಮುಖ ಕಿಂಗ್​ಪಿನ್​ ಎನ್ನುವ ಆರೋಪ ಹೊತ್ತಿರುವ ಅರವಿಂದ್ ಕೇಜ್ರಿವಾಲ್​ಗೆ ಇತ್ತೀಚೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.

ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್​ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.

ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ ಕೊನೆಯ ಹಂತದ ಮತದಾನದ ಒಂದು ದಿನದ ನಂತರ ಜೂನ್ 2 ರಂದು ದೆಹಲಿ ಸಿಎಂ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಗುತ್ತದೆ.

ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು? ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್​, ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ನಿರ್ಧಾರ ಸೂಕ್ತ, ಅವರಿಗೆ ಯಾವುದೇ ಅಪರಾಧ ಇತಿಹಾಸವಿಲ್ಲ. ಅವರು ಸಮಾಜಕ್ಕೆ ಬೆದರಿಕೆಯಲ್ಲ, ಅವರ ವಿರುದ್ಧ ಗಂಭೀರ ಆರೋಪಗಳಿವೆ ಆದರೆ ಅದ್ಯಾವುದರಲ್ಲೂ ಸಾಬೀತಾಗಿ ಶಿಕ್ಷೆಯಾಗಿಲ್ಲ ಎಂದು ಹೇಳಿತ್ತು. ಅಷ್ಟೇ ಅಲ್ಲದೆ ಯಾವುದೇ ಸಾಕ್ಷಿ ಜತೆ ಮಾತನಾಡದಂತೆ ಸೂಚಿಸಿತ್ತು.

ಮೇ 17 ರಂದು, ಜಾರಿ ನಿರ್ದೇಶನಾಲಯವು (ಇಡಿ) ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಈ ವೇಳೆ ಸಾಮಾನ್ಯ ಜಾಮೀನಿಗಾಗಿ ಕೆಳ ನ್ಯಾಯಾಲಯವನ್ನು ಸಂಪರ್ಕಿಸಲು ನ್ಯಾಯಾಲಯ ಅವರಿಗೆ ಅನುಮತಿ ನೀಡಿತ್ತು.

ಕೇಜ್ರಿವಾಲ್ ಅಲ್ಲದೆ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಿಖಾ ಸಂಸ್ಥೆ ಮನೀಶ್ ಸಿಸೋಡಿಯಾ ಅವರನ್ನು ಕೂಡ ಬಂಧಿಸಿದೆ. ಅವರು ಈಗ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನೂ ಬಂಧಿಸಲಾಗಿತ್ತು. ಆದರೆ, ಅವರು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ.