ಮನೆ ಅಪರಾಧ ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ: ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳು ಅಮಾನತು

ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ: ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳು ಅಮಾನತು

0

ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್​ ಡೆತ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

Join Our Whatsapp Group

ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್‌ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅವರನ್ನು ಅಮಾನತು ಗೃಹ ಸಚಿವ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್​ ವಶದಲ್ಲಿದ್ದ ಆದಿಲ್ ಎಂಬ ಯುವಕ ಮೇ 24 ರಂದು ಮೃತಪಟ್ಟಿದ್ದ. ಇದರಿಂದ ರೊಚ್ಚಿಗೆದ್ದ ಕುಟುಂಬಸ್ಥರು, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಆರೋಪಿಸಿ ಚನ್ನಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಪ್ರಕರಣ ಹಿನ್ನಲೆ

ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಠಾಣೆಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳನ್ನು ಧ್ವಂಸಗೊಳಸಿದ್ದರು. ಹಾಗೇ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು.

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದವರ ಪೈಕಿ ಈಗಾಗಲೇ ಪೊಲೀಸರು 20ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಇನ್ನು ಈ ಬಗ್ಗೆ ನ್ನಗಿರಿ ಮುಸ್ಲಿಂ ಸಮಾಜದ ಮುಖಂಡ ಮಹ್ಮದ್ ಜಬಿವುಲ್ಲಾ ಪ್ರತಿಕ್ರಿಯಿಸಿದ್ದು, ಆರೋಪಿಗಳಿಗೆ ಶಿಕ್ಷೆ ‌ ಕೊಡಿ. ಆದ್ರೆ ಅಮಾಕರಿಗೆ ಅನಗತ್ಯ ಕಿರುಕಳ‌ ನೀಡಬೇಡಿ. ಬೇದರಿಕೆಗೆ ಬೇಸತ್ತು ಜನ ಬಹುತೇಕ ಕಡೆ ಮನೆ ಬೀಗ ಹಾಕಿಕೊಂಡು ಹೋಗುತ್ತಿದ್ದಾರೆ. ಅಮಾಯಕರಿಗೆ ಹಿಂಸೆ ಬೇಡ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.