ಮನೆ ಅಪರಾಧ ಬೀದರ್​ನಲ್ಲಿ ಯುವಕನ ಬರ್ಬರ ಕೊಲೆ

ಬೀದರ್​ನಲ್ಲಿ ಯುವಕನ ಬರ್ಬರ ಕೊಲೆ

0

ಬೀದರ್​(Beedar): ಅಂಗಡಿಗೆ ನುಗ್ಗಿ ಯುವಕನನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಿಂಗಾರ್​ ಬಾಗ್​ನಲ್ಲಿ ನಡೆದಿದೆ.

ಸಿಂಗಾರಬಾಗ್ ನಿವಾಸಿ 20 ವರ್ಷದ ಅಮೀರ್ ಖಾನ್ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ನೂರ್ ಖಾನ್ ತಾಲಿಬ್ ನಿವಾಸಿ ಜೀಷನ್ ಎಂಬಾತ ಕೊಲೆ ಮಾಡಿದ ಆರೋಪಿ.

ನೂರ್ ಖಾನ್ ತಾಲಿಬ್ ನಿವಾಸಿ ಜೀಷನ್ ಸಹೋದರಿಯನ್ನು ಅಮೀರ್​ ಖಾನ್​ ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ ಅಮೀರ್​ ಖಾನ್​ ಕೆಲಸ ಮಾಡುತ್ತಿದ್ದ ಅಂಗಡಿಗೆ ತೆರಳಿ ಮನಸೋಇಚ್ಛೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಅಮೀರ್​ ಖಾನ್​ ಸಾವನ್ನಪ್ಪಿದ್ದಾನೆ.

ಯುವಕನ ಕೊಲೆ ಮಾಡುತ್ತಿರುವ ದೃಶ್ಯಗಳು ಅಂಗಡಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗ್ತಿದೆ.

ಈ ಘಟನೆ ಸಂಬಂಧ ಮೃತ ಅಮೀರ್ ಖಾನ್​ ಪೋಷಕರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಜೀಷನ್​ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.