ಮನೆ ಅಪರಾಧ ಬೆಳ್ಳೂರು ಗ್ರಾಮದಲ್ಲಿ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ: ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ

ಬೆಳ್ಳೂರು ಗ್ರಾಮದಲ್ಲಿ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ: ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ

0

ಮಂಡ್ಯ: ನಾಗಮಂಗಲ ‌ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಯುವಕರು ಓರ್ವ ಮಹಿಳೆ ಮನೆ ಬಳಿ ದಾಂಧಲೆ, ನಡೆಸಿ ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

Join Our Whatsapp Group

ಶನಿವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಲ್ಲದೇ ಓವರ್​ ಟೇಕ್​ ಮಾಡುವಾಗ ಬೈಕ್​ ಗೆ ಟಚ್​ ಆಗಿದೆ. ಇದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರು, ಸೋಮವಾರ (ಮೇ 28) ರಂದು ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಅಭಿಲಾಷ್ ಹಲ್ಲೆ ಮಾಡಿದ್ದರು.

ಅಭಿಲಾಷ್ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಭಿಲಾಷ್ ಮೇಲೆ ಹಲ್ಲೆ ಮಾಡುವುದನ್ನು ತಡೆಯಲು ಬಂದವರ ಮೇಲೂ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ. ಬಳಿಕ ಮುಸ್ಲಿಂ ಯುವಕರು ತಡರಾತ್ರಿ ಅಭಿಲಾಷ್ ಮಾವ ನಾಗೇಶ್ ಮನೆ ಬಳಿ ತೆರಳಿ ದಾಂಧಲೆ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ನಾಗೇಶ್ ಪತ್ನಿ ರಶ್ಮಿ ಬಾಗಿಲು ಹಾಕಿಕೊಂಡರೂ ಬಿಡಿದ ಮುಸ್ಲಿಂ ಯುವಕರು, ಬಾಗಿಲು ಬಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ, ದಾಂಧಲೆಯನ್ನು ತೀವ್ರಗೊಳಿಸಿದ್ದಾರೆ.

ಹಲ್ಲೆಗೊಂಡ ಹಿಂದೂ ಕಾರ್ಯಕರ್ತನನ್ನು ಬಿ.ಜಿ.ಎಸ್.ಆಸ್ಪತ್ರೆ ಗೆ ದಾಖಲಿಸಲಾಗಿದೆ.

ಘಟನೆಯಿಂದ ನಾಗೇಶ್​ ಕುಟುಂಬ ಆತಂಕದಲ್ಲಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಯಾಳುವಿನ ಆರೋಗ್ಯ ವಿಚಾರಿಸಿದ ಮಾಜಿ ಶಾಸಕ ಸುರೇಶ್ ಗೌಡ

ನಾಗಮಂಗಲದ ಬೆಳ್ಳೂರಿನಲ್ಲಿ ಹಿಂದೂ ಯುವಕನ ಮೇಲೆ ಮುಸ್ಲಿಂರಿಂದ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಏಮ್ಸ್ ಆಸ್ಪತ್ರೆಗೆ ಮಾಜಿ ಶಾಸಕ ಸುರೇಶ್ ಗೌಡ ಭೇಟಿ ನೀಡಿದ್ದು, ಗಾಯಾಳು ಯುವಕ ಅಭಿಲಾಶ್ ಆರೋಗ್ಯ ವಿಚಾರಿಸಿ ಕುಟುಂಬದವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ಘಟನೆಗೆ ಕಾರಣರಾದವರನ್ನು ಬಂಧಿಸುವಂತೆ ಸುರೇಶ್ ಗೌಡ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಈ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಕುಸಿದಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡಿ ಕೊಲೆ, ಮತ್ತು ಹಲ್ಲೆ ಯತ್ನ ನಡೆಸುತ್ತಿದ್ದಾರೆಂದು ಆಕ್ರೋಶ  ಹೊರಹಾಕಿದ ಅವರು, ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಸರ್ಕಾರದ ಕುಮ್ಮಕ್ಕು ಇದೆ. ಎಂದು ಸರ್ಕಾರದ ವಿರುದ್ಧ ಆರೋಪಿಸಿದರು.

ಬೆಳ್ಳೂರು ಪಟ್ಟಣ ಬಂದ್ ಗೆ ಕರೆ

ಮುಸ್ಲಿಂ ಯುವಕರ ಗುಂಪಿನಿಂದ ಹಿಂದು ಯುವಕನ ಮೇಲೆ ಹಲ್ಲೆ ಖಂಡಿಸಿ ಇಂದು  ಹಿಂದೂಪರ ಸಂಘಟನೆಗಳಿಂದ ಬೆಳ್ಳೂರು ಪಟ್ಟಣ ಬಂದಗೆ ಕರೆ ನೀಡಲಾಗಿದೆ.

ಬೆಳ್ಳೂರು ಪಟ್ಟಣದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.

ಹಲ್ಲೆ ನಡೆಸಿರುವವರ ಬಂಧನಕ್ಕೆ  ಆಗ್ರಹಿಸಿ ಕ್ರಮಕ್ಕೆ ಕಾರ್ಯಕರ್ತರು ಒತ್ತಾಯಿಸಲಿದ್ದಾರೆ.

ಬೆಳ್ಳೂರು ಪಟ್ಟಣದ ಬಂದ್ ಗೆ ಕರೆ ಹಿನ್ನಲೆ ಪಟ್ಟಣದಲ್ಲಿ ಹೆಚ್ಚಿನ‌ ಪೊಲೀಸರ ನಿಯೋಜನೆ ಮಾಡಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.