ಕಲಬುರಗಿ: ಎಸ್ ಟಿ ಬೋರ್ಡ್ ನಲ್ಲಿ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಇಲಾಖೆಯ ಸಚಿವ ನಾಗೇಂದ್ರರನ್ನು ವಜಾ ಮಾಡಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಕಲಬುರಗಿಯಲ್ಲಿ ಮಾತನಾಡಿದ ಅವರು, ನಿಜವಾಗಿಯೂ ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್. ಕೂಡಲೆ ಸಿಎಂ ಸಿದ್ದರಾಮಯ್ಯ ಆ ಇಲಾಖೆಯ ಸಚಿವರನ್ನು ಮಂತ್ರಿ ಮಂಡಲದಿಂದ ಕೈ ಬಿಡಬೇಕು ಎಂದರು.
ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ಈ ವಿಚಾರವಾಗಿ ನಾವು ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅವರು ಹೇಳಿದರು.
ಏನಿದು ಪ್ರಕರಣ ?
ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿತ್ತು. ಇದಕ್ಕೆ ಪೂರಕ ಅಂಶಗಳು ಅವರು ಬರೆದಿಟ್ಟಿದ್ದ ಡೆತ್ನೋಟ್ನಲ್ಲಿತ್ತು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.