ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯಿಂದ ತುಂಬ ನೋವಾಗಿದೆ. ಮರಣಪತ್ರದಲ್ಲಿ ಅವರು ಕೆಲವು ಆರೋಪಗಳನ್ನು ಮಾಡಿದ್ದಾರೆ. ತಕ್ಷಣವೆ ಸರ್ಕಾರ ತನಿಖೆ ಆರಂಭಿಸಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಗಡೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಲ್ಲಿ ದಲಿತರು, ದಲಿತೇತರ ಹಣ ಎಂದಲ್ಲ. ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗುವುದಿಲ್ಲ. ಪ್ರಕರಣವನ್ನು ರಾಜಕೀಯಕರಣಗೊಳಿಸಿದ ತಕ್ಷಣ ಮಾತನಾಡಲು ಆಗುವುದಿಲ್ಲ. ಕೆ.ಎಸ್. ಈಶ್ವರಪ್ಪ ಪ್ರಕರಣವೇ ಬೇರೆ, ನಿಗಮದ ಹಣ ವರ್ಗಾವಣೆ ಪ್ರಕರಣವೇ ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ವಿರೋಧ ಪಕ್ಷ ಆಗಿರುವರಿಂದ, ಆ ಪಕ್ಷದವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಸತ್ಯಾಸತ್ಯತೆ ಹೊರಗಡೆ ಬಾರದೆ ಯಾವ ತೀರ್ಮಾನ ಮಾಡಲಾಗುತ್ತದೆ ಎಂದರು.
ಕಾಂಗ್ರೆಸ್ ಕಚೇರಿಗೆ ಸಚಿವರು ಹೋಗಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹದೇವಪ್ಪ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಪಕ್ಷ ಸಂಘಟನೆ ಮಾಡಬೇಕು. ಪಕ್ಷದ ಅಧ್ಯಕ್ಷರಾಗಿ ಅವರು ಆ ಮಾತು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಕೆಲಸವನ್ನು ಹೇಳಿಸಿಕೊಂಡು ಮಾಡುವುದಲ್ಲ. ಅದು ನಮ್ಮ ಕರ್ತವ್ಯ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದನ್ನು ಎಐಸಿಸಿ ತೀರ್ಮಾನಿಸಲಿದೆ ಎಂದರು.
ಕೆಪಿಸಿಸಿ ಅಧ್ಯಕ್ಷನಾಗಬೇಕೆಂದು ಕೆ.ಎನ್. ರಾಜಣ್ಣ ಬಯಕೆ ವ್ಯಕ್ತಪಡಿಸಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಅಧ್ಯಕ್ಷರಾಗಲು ಎಲ್ಲರಿಗೂ ಮುಕ್ತ ಅವಕಾಶಗಳಿವೆ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾವ ಸಂದರ್ಭದಲ್ಲಿ ಏನೇನು ತೀರ್ಮಾನವನ್ನು ಹೇಳಿದ್ದರೋ ಅದನ್ನು ಪರಾಮರ್ಶೆ ಮಾಡುವ ಅಧಿಕಾರ ಇರುವುದು ಹೈಕಮಾಂಡ್ಗೆ ಮಾತ್ರ. ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ಮಾಡಲಿದೆ ಎಂದರು.
ಮಧ್ಯ ಕೂಟನಡೆಸಿ ಕೃತಜ್ಞತೆ ಸಲ್ಲಿಸಿದ ಬಿಜೆಪಿ ಸಂಸದ ಕೆ ಸುಧಾಕರ್!
ಜೋಗದ ಗುಂಡಿಯಲ್ಲಿ ಧುಮ್ಮಕ್ಕುತ್ತಿದೆ ಜಲಧಾರೆ
ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಾಣಿಗಳಲ್ಲಿರುವ ಪ್ರೀತಿ ಮತ್ತು ಒಗ್ಗಟ್ಟುನು ಒಮ್ಮೆ ನೋಡಿ
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.