ಮನೆ ರಾಷ್ಟ್ರೀಯ ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ: ಒಂದು ಸಾವು; 6 ಮಂದಿಗೆ ಗಾಯ

ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ: ಒಂದು ಸಾವು; 6 ಮಂದಿಗೆ ಗಾಯ

0

ನವದೆಹಲಿ (New Delhi)- ರಾಷ್ಟ್ರ ರಾಜಧಾನಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಜೀವ ದಹನವಾಗಿದ್ದು, 6 ಮಂದಿ ಗಾಯಗೊಂಡಿದ್ದಾರೆ.

ಇಂದು ಈಶಾನ್ಯ ದೆಹಲಿಯ ನ್ಯೂ ಮುಸ್ತಫಾಬಾದ್ ಪ್ರದೇಶದ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, 6 ಮಂದಿಗೆ ಸುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ 6 ಅಗ್ನಿಶಾಮಕ ದಳದ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ನೆಲಮಾಳಿಗೆ ಮತ್ತು ಮೊದಲ ಮಹಡಿಯನ್ನು ಒಳಗೊಂಡಿರುವ ಕಟ್ಟಡದೊಳಗೆ ಸಿಲುಕಿಕೊಂಡಿದ್ದ 7 ಮಂದಿಯನ್ನು ರಕ್ಷಿಸಿದ್ದಾರೆ. ಆದರೆ ಗಾಯಗೊಂಡವರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ ಹಾಗೂ ಗಾಯಾಳುಗಳ ಪೈಕಿ ಮಹಿಳೆಯೋರ್ವಳ ಸ್ಥಿತಿ ಗಂಭೀರವಾಗಿದೆ.

ಕೂಲರ್ ನ ಕವಚಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ವಾರ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಇದರಲ್ಲಿ 27 ಜನರು ಸಾವನ್ನಪ್ಪಿ, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಘಟನೆಯ ನಂತರ ಕಟ್ಟಡದ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.