ಮನೆ ಅಪರಾಧ ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ

0

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಆರೋಪಿಗಳು ಕೋರಿದ್ದ ಜಾಮೀನು ಅರ್ಜಿಯನ್ನು  ರದ್ದುಪಡಿಸಿ ಶ್ರೀರಂಗಪಟ್ಟಣ ನ್ಯಾಯಾಲಯದ ನ್ಯಾಯಾಧೀಶರು  ಆದೇಶ ಹೊರಡಿಸಿದ್ದಾರೆ.

ಸಿ.ಜಿ.ಗಿರಿಜಾಂಬ, ಶಿವಲಿಂಗ ನಾಯಕ್, ನವೀನ್ ಕುಮಾರ್.ಎಸ್, ಕಿರಣ್ ಎಂ.ಎಸ್, ಅಖಿಲಾಶ್ ಹೆಚ್.ಪಿ,  ಶೃತಿ, ಸತ್ಯಮ್ಮ, ಕುಮಾರ ಮತ್ತು ಆನಂದ ಎಂ ಅವರ ಜಾಮೀನನ್ನು ರದ್ದುಪಡಿಸಿ ಶ್ರೀರಂಗಪಟ್ಟಣದ  3 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಟಿ ಗೋಪಾಲಕೃಷ್ಣ ರೈ. ಸದರಿ ಆದೇಶ ಹೊರಡಿಸಿದ್ದಾರೆ.

ಪ್ರಕರಣ ಸಂಬಂಧ ಎಸ್ ಪಿ ಯತೀಶ್ ಮತ್ತು ಡಿವೈಎಸ್ಪಿ ಮುರಳಿ ಅವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಪಾಂಡವಪುರ ಪೊಲೀಸ್ ಠಾಣೆಯ  ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ಸರ್ಕಾರಿ ಅಭಿಯೋಜಕರಾಗಿ ಪ್ರಫುಲ್ಲಾ ಎಂ.ಕೆ. ವಾದಿಸಿದ್ದರು.

ಪ್ರಕರಣದ ವಿವರ

ಮಂಡ್ಯದ ಪಾಂಡವಪುರದ ಪಟ್ಟಣದ ಆರೋಗ್ಯ ಇಲಾಖೆ ವಸತಿ ಗೃಹದಲ್ಲೇ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿತ್ತು.

 ಅಂಬ್ಯುಲೆನ್ಸ್ ಚಾಲಕನಾಗಿದ್ದ ಆನಂದ್‌ಗೆ ಪಾಂಡವಪುರ ತಾಲೂಕು ಆರೋಗ್ಯ ಇಲಾಖೆಗೆ ಸೇರಿದ ವಸತಿಗೃಹವನ್ನು ವಾಸಕ್ಕೆ ನೀಡಲಾಗಿತ್ತು. ಆನಂದ್, ಪತ್ನಿ ಅಶ್ವಿನಿ, ಆಕೆಯ ತಾಯಿ ಸತ್ಯಮ್ಮ ಅಲ್ಲಿ ವಾಸವಿದ್ದರು. ಅಶ್ವಿನಿ ಆರೋಗ್ಯ ಇಲಾಖೆಯಲ್ಲೇ ಹೊರಗುತ್ತಿಗೆ ಆಧಾರದ ಮೇಲೆ ಡಿ-ಗ್ರೂಪ್ ನೌಕರೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ವಸತಿ ಗೃಹದಲ್ಲಿ ವಾಸವಿದ್ದ ಆನಂದ್ ಮತ್ತು ಅಶ್ವಿನಿ ರಹಸ್ಯವಾಗಿ ಹೊರಗಿನಿಂದ ಗರ್ಭಿಣಿ ಮಹಿಳೆಯರನ್ನು ಕರೆತಂದು ಹೆಣ್ಣು ಭ್ರೂಣಹತ್ಯೆ ನಡೆಸುತ್ತಿದ್ದರು. ಕಳೆದ ಆರು ತಿಂಗಳಿಂದ ದಂಪತಿ ಈ ಕೃತ್ಯದಲ್ಲಿ ತೊಡಗಿದ್ದರು. ಇದಕ್ಕೆ ಖಾಸಗಿ ನರ್ಸಿಂಗ್ ಹೋಂನಲ್ಲಿ ಡಿ-ಗ್ರೂಪ್ ನೌಕರೆಯಾಗಿ ಕೆಲಸ ನಿರ್ವಹಿಸಿ ಅನುಭವ ಹೊಂದಿದ್ದ ಗಿರಿಜಮ್ಮ ಸಹಾಯ ಮಾಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿತ್ತು.