ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಬಂಧಿಸಿ ಇಂದು ಬೆಂಗಳೂರಿನ 42ನೇ ಎಸಿ ಎಂ ಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, 15 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.
ಪ್ರಕರಣ ಸಂಬಂಧ ವಾದ ಪ್ರತಿವಾದಗಳು ಅಂತ್ಯವಾಗಿದ್ದು, ನ್ಯಾಯಾಲಯವು ಸಂಜೆ 4:15ಕ್ಕೆ ಪ್ರಜ್ವಲ್ ರೇವಣ್ಣ ಕಸ್ಟಡಿಗೆ ನೀಡಬೇಕೂ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕೋ ಎಂಬ ಕುರಿತು ಆದೇಶ ಹೊರಡಿಸಲಿದೆ.
ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಅವರು ವಾದ ಮಂಡಿಸಿದರು. ಎಸ್‌ಐಟಿ ಪರ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿದರು.