ಮನೆ ಕಾನೂನು ಜಾಮೀನು ಅರ್ಜಿ ವಜಾ ಗೊಳಿಸಿದಕೋರ್ಟ್‌: ಭವಾನಿಗೆ ಬಂಧನ ಭೀತಿ

ಜಾಮೀನು ಅರ್ಜಿ ವಜಾ ಗೊಳಿಸಿದಕೋರ್ಟ್‌: ಭವಾನಿಗೆ ಬಂಧನ ಭೀತಿ

0

ಬೆಂಗಳೂರು:ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಪತ್ನಿ, ಅಮಾನತುಗೊಂಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

Join Our Whatsapp Group


ಮೈಸೂರಿನ ಕೆಆರ್ ನಗರದಲ್ಲಿ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಭವಾನಿ ಬುಧವಾರ ನಿರೀಕ್ಷಣಾ ಜಾಮೀನು ಕೋರಿದ್ದರು.
ಪ್ರಜ್ವಲ್ ರೇವಣ್ಣ ಮತ್ತು ಎಚ್‌.ಡಿ. ರೇವಣ್ಣ ವಿರುದ್ಧದ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ, ಭವಾನಿ ಅವರ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದೆ. ಮನೆ ಕೆಲಸದಾಕೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಪಾತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಪ್ರತಿಪಾದಿಸಿದೆ.
ಭವಾನಿ ರೇವಣ್ಣ ಮತ್ತು ಅವರ ಕುಟುಂಬ ಸದಸ್ಯರು ಪ್ರಭಾವಿಗಳಾಗಿದ್ದು, ಸಾಕ್ಷ್ಯಗಳನ್ನು ನಾಶ ಮಾಡಬಹುದು ಮತ್ತು ಸಂತ್ರಸ್ತರು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಜೂನ್ 6ರವರೆಗೆ ಕಸ್ಟಡಿಗೆ ಪಡೆದಿರುವ ಎಸ್‌ಐಟಿ ಭವಾನಿ ಅವರನ್ನು ಶನಿವಾರ ಹೊಳೆನರಸೀಪುರದ ನಿವಾಸದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.