ಮನೆ ಕಾನೂನು ಜೂನ್ 6ರವರೆಗೆ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ

ಜೂನ್ 6ರವರೆಗೆ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ

0

ಬೆಂಗಳೂರು:ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರ ತನಕ 6 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರು 35 ದಿನಗಳ ಬಳಿಕ ದೇಶಕ್ಕೆ ಮರಳಿದ್ದರು.

Join Our Whatsapp Group


ಗುರುವಾರ ತಡರಾತ್ರಿ ಬೆಂಗಳೂರಿಗೆ ಮರಳುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿಯೇ ಎಸ್ ಐಟಿ ತಂಡವು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿತ್ತು.
ಎಸ್‌ಐಟಿ ಪ್ರಜ್ವಲ್ ಅವರನ್ನು 15 ದಿನಗಳ ಕಾಲ ಕಸ್ಟಡಿಗೆ ಮನವಿ ಮಾಡಿತ್ತು. ಆದರೆ ಕೋರ್ಟ್ ಆರು ದಿನಗಳ ಕಾಲ ಕಸ್ಟಡಿಗೆ ನೀಡಿದೆ
ಇಂದು ಪ್ರಜ್ವಲ್ ರೇವಣ್ಣ ಅವರ ಮೆಡಿಕಲ್ ಚೆಕಪ್ ನಡೆಸಿರುವ ಎಸ್‌ಐಟಿ ಅಧಿಕಾರಿಗಳು ಬಳಿಕ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿ ಸುಮನ್ ಡಿ ಪೆನ್ನೇಕರ್ ಮತ್ತು ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರನ್ನು ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರುಪಡಿಸಿದರು. ಇದಕ್ಕೂ ಮುನ್ನ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಸಂಪೂರ್ಣವಾಗಿ ವೈದ್ಯಕೀಯ ತಪಾಸಣೆ ಮಾಡಲಾಯಿತು.
ಏರ್‌ಪೋರ್ಟ್‌ನಲ್ಲಿ ಹಲವು ಪ್ರಕ್ರಿಯೆ: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ಹಾಗೂ ಲುಕ್‌ಔಟ್‌ ನೋಟಿಸ್‌ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರು ವಿಮಾನ ಏರಿದ ಕೂಡಲೇ ಬ್ಯೂರೋ ಆಫ್ ಇಮಿಗ್ರೇಷನ್‌ ಮೂಲಕ ಇಮಿಗ್ರೇಷನ್‌ ಸೆಂಟರ್‌ಗೆ ಪ್ರಜ್ವಲ್‌ ಬಗ್ಗೆ ಮಾಹಿತಿ ರವಾನೆಯಾಗಿತ್ತು. ಜೊತೆಗೆ ಎಸ್‌ಐಟಿ ತನಿಖಾಧಿಕಾರಿಗಳಿಗೂ ಮಾಹಿತಿ ರವಾನೆಯಾಗಿತ್ತು. ಲುಕ್‌ ಔಟ್‌ ನೋಟಿಸ್‌ ನೀಡಿರುವ ಹಿನ್ನೆಲೆಯಲ್ಲಿ ಪ್ರಜ್ವಲ್‌ ಅವರನ್ನು ಬೆಂಗಳೂರಿನಲ್ಲಿ ಏರ್‌ಪೋರ್ಟ್‌ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಬಳಿಕ ಅವರ ಪಾಸ್‌ಪೋರ್ಟ್‌, ಟಿಕೆಟ್‌, ವೀಸಾ ಪರಿಶೀಲಿಸಿದ ಬಳಿಕ ಏರ್‌ಪೋರ್ಟ್‌ ಪೊಲೀಸರ ವಶಕ್ಕೆ ಪ್ರಜ್ವಲ್‌ರನ್ನು ನೀಡಲಾಗಿದೆ. ಬಳಿಕ ಕೆಲವೊಂದು ಪ್ರಕ್ರಿಯೆ ನಡೆಸಿ ಎಸ್‌ಐಟಿಗೆ ಹಸ್ತಾಂತರಿಸಲಾಗಿತ್ತು.