ಮನೆ ಅಪರಾಧ ಶಿವಮೊಗ್ಗ: ವೃದ್ಧೆಯ ಬರ್ಬರ ಹತ್ಯೆ

ಶಿವಮೊಗ್ಗ: ವೃದ್ಧೆಯ ಬರ್ಬರ ಹತ್ಯೆ

0

ಶಿವಮೊಗ್ಗ: 70 ವರ್ಷದ ಪ್ರಾಯದ ವೃದ್ಧೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

Join Our Whatsapp Group

ಫಜಲುನ್ನಿಸ್ಸಾ (70) ಕೊಲೆಯಾದ ಮಹಿಳೆ. ಕೊಲೆ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.