ಮನೆ ರಾಜ್ಯ ಧಾರಾಕಾರ ಮಳೆಯಾಗುವ ಸಾಧ್ಯತೆ: ಉಡುಪಿ, ಶಿವಮೊಗ್ಗದಲ್ಲಿ ಇಂದು ರಜೆ ಘೋಷಣೆ

ಧಾರಾಕಾರ ಮಳೆಯಾಗುವ ಸಾಧ್ಯತೆ: ಉಡುಪಿ, ಶಿವಮೊಗ್ಗದಲ್ಲಿ ಇಂದು ರಜೆ ಘೋಷಣೆ

0

ಉಡುಪಿ (Udupi)-ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಮತ್ತು ಉಡುಪಿಯಲ್ಲಿ ಇಂದು ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯ ಶಾಲೆ ಮತ್ತು ಪದವಿ ವಿಭಾಗದ ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ರಜೆ ಘೋಷಣೆ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ /ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಎಂ.ಕೂರ್ಮರಾವ್‌ ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ, ಸರ್ಕಾರಿ, ಖಾಸಗಿ, ಮತ್ತು ಪದವಿ ಪೂರ್ವ ಇಲಾಖೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುರುವಾರವೂ ನಿರಂತರವಾಗಿ ಮಳೆ ಸುರಿದಿದ್ದು, ಇಂದು ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 

ಇನ್ನು ಶಿವಮೊಗ್ಗದಲ್ಲೂ ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.