ಮನೆ ಅಪರಾಧ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ​: ಕೆಲಕಾಲ ಆತಂಕ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ​: ಕೆಲಕಾಲ ಆತಂಕ

0

ಬೆಂಗಳೂರು(Bengaluru): ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪರಿಚಿತ ವ್ಯಕ್ತಿಗಳು ಶುಕ್ರವಾರ ಮುಂಜಾನೆ ಹುಸಿ ಬಾಂಬ್ ಕರೆ ಮಾಡಿದ್ದು, ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. 

ಇಂದು ಬೆಳಗಿನ ಜಾವ 3.30 ರ ಸಮಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಮಾಹಿತಿ ನೀಡಿದ್ದಾನೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ವಿಮಾನ ನಿಲ್ದಾಣದ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಎಲ್ಲೆಡೆ ಪರಿಶೀಲನೆ ನಡೆಸಿದರು. ಡಾಗ್ ಸ್ಕ್ವಾಡ್, ಸಿಎಸ್ ಎಫ್, ಬಿಎಸ್ ಎಫ್ ತಂಡದವರು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು. 

ಏರ್‌ಲೈನ್ ಗೇಟ್‌ಗಳು ಸೇರಿದಂತೆ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ತಪಾಸಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ನಿಟ್ಟುಸಿರು ಬಿಟ್ಟರು.