ಮನೆ ಅಪರಾಧ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ: ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಬಂಧನ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ: ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಬಂಧನ

0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನ ಬಂಧಿಸಲಾಗಿದೆ.

Join Our Whatsapp Group

ಬರೊಬ್ಬರಿ 18 ನಕಲಿ ಖಾತೆ ಸೃಷ್ಟಿಸಿ ಹಣ ವರ್ಗಾಯಿಸಿದ ಆರೋಪದಡಿ ಅರೆಸ್ಟ್​ ಮಾಡಿ 8 ದಿನಗಳ ಎಸ್​ಐಟಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ನಿನ್ನೆ(ಜೂ.04) ಆತನನ್ನು ಪೊಲೀಸರು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದರು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ರಾಜ್ಯ ಸರ್ಕಾರ ಪ್ರಕರಣವನ್ನು ಎಸ್​​ಐಟಿಗೆ ನೀಡಿತ್ತು.  ಅದರ ಬೆನ್ನೆಲ್ಲೇ ಇದೇ ಜೂನ್​ 01 ರಂದು ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಬಂಧಿಸಿ, ಅವರನ್ನು 6 ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿತ್ತು. ಈ ಮಧ್ಯೆ ಇದೀಗ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷನನ್ನು ಬಂಧಿಸಿ, ಎಸ್​ಐಟಿ ವಶಕ್ಕೆ ಪಡೆದಿದೆ.

ಏನಿದು ಪ್ರಕರಣ?

ಕೆಲ ದಿನಗಳ ಹಿಂದೆ ಶಿವಮೊಗ್ಗದ ವಿನೋಬನಗರದ ಕೆಂಚಪ್ಪ ಲೇಔಟ್ ​ನಲ್ಲಿ ರಾತ್ರಿ ಸಮಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧೀಕ್ಷಕ ಚಂದ್ರಶೇಖರ್ ನೇಣಿಗೆ ಶರಣಾಗಿದ್ದರು. ಈ ವೇಳೆ ಆರು ಪುಟಗಳ ಡೆತ್ ನೋಟ್ ಬರೆದಿಟ್ಟು, ಅದರಲ್ಲಿ 187.33 ಕೋಟಿ ರೂ. ನಿಗಮ ಅನುದಾನದಲ್ಲಿ 80 ರಿಂದ 85 ಕೋಟಿ ರೂ. ಅವ್ಯವಹಾರ ಆಗಿದೆ. ಈ ವ್ಯವಹಾರಕ್ಕೆ ತನ್ನನ್ನು ಹಿರಿಯ ಅಧಿಕಾರಿಗಳಾದ ಪದ್ಮನಾಭ್ಮ, ಪರಶುರಾಮ್ ಹಾಗೂ ಬೆಂಗಳೂರು ಎಂ ಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮಿತಾ ರವುಲ್ ಮೂವರು ಸೇರಿ ಗೋಲ್ ಮಾಲ್ ಮಾಡಿದ್ದಾರೆ ಎಂದು ಬರೆದಿದ್ದರು.