ಮನೆ ಸ್ಥಳೀಯ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ ಚುನಾವಣೆ:...

ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ ಚುನಾವಣೆ: ಮತಗಳ ಎಣಿಕೆ ಆರಂಭ

0

ಮೈಸೂರು: ವಿಧಾನ ಪರಿಷತ್ ಚುನಾವಣೆ ಸಂಬಂಧ ಇಂದು ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಇಂದು ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ .ಜೆ ಅವರ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರವುಗೊಳಿಸಲಾಯಿತು.

Join Our Whatsapp Group

ಮೈಸೂರಿನ ಜೆ ಎಲ್ ಬಿ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜಿನಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ.

ಪ್ರತಿ ಕ್ಷೇತ್ರಕ್ಕೂ 14 ಟೇಬಲ್ ಗಳು ಮತ್ತು ಒಂದು ಚುನಾವಣಾಧಿಕಾರಿ ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್ ಗೂ ಒಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರು ನಿಯೋಜನೆ ಮಾಡಲಾಗಿದೆ.

ಪ್ರತಿ ಟೇಬಲ್ ಗೂ ಒಬ್ಬರಂತೆ ಏಜೆಂಟರನ್ನು ನೇಮಕ ಮಾಡಲಾಗಿದೆ.