ತುಮಕೂರು: ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನಿಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗಿ ಮಾತನಾಡಿದ ಅವರು, ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇವರೆಲ್ಲರೂ ಡಿ.ಕೆ.ಸುರೇಶ್ರನ್ನು ಸೋಲಿಸ್ತಾರೆಂದು ಒಂದು ತಿಂಗಳ ಹಿಂದೆಯೇ ಹೇಳಿದ್ದೆ, ಈಗ ಅದು ರಿಪೀಟ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಅಂತಾ ಒಂದು ಅಹಿಂದ ಟೀಮ್ ಯಾವಾಗಲೂ ಸಹ ಕೆಲಸ ಮಾಡುತ್ತೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ.ಸುರೇಶ್ ಸೋಲಿಸಿದ್ದಾರೆ. 2 ಲಕ್ಷ ಮತಗಳ ಅಂತರದಿಂದ ಸುರೇಶ್ರನ್ನು ಸೋಲಿಸ್ತಾರೆಂದು ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸುರೇಶ್ರನ್ನು ಸೋಲಿಸಿದ್ದಾರೆ. ಇದು ಸಂಚಿನ ಒಂದು ಭಾಗ ಎಂದು ಹೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚು ರೂಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೈತಿಕತೆ ಕುಸಿಯಬೇಕು ಅಂತಾ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರವೂ ಉಳಿಯಲ್ಲ. ರಾಜಕೀಯ ಧ್ರುವೀಕರಣ ಶುರುವಾಗುತ್ತೆ ಎಂದಿದ್ದಾರೆ.
ಕಾಂಗ್ರೆಸ್ ನಲ್ಲಿ ಒಳಜಗಳ ಶುರುವಾಗುತ್ತೆ. ಈಗಾಗಲೇ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರ ಸೋಲಿನಿಂದ ಇಲ್ಲೂ ಜಗಳ ಶುರುವಾಗಿದೆ. ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.
ಜೂನ್ 4 ರಂದು, ಭಾರತೀಯ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರನ್ನು 2,69,647 ರಿಂದ ಸೋಲಿಸಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಪ್ರವೇಶದ ಮೊದಲ ಹೆಜ್ಜೆಯಲ್ಲೇ ಪ್ರಭಾವಿ ನಾಯಕನನ್ನು ಮಣಿಸಿದ್ದಾರೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಮಂಜುನಾಥ್ ಅವರು 10,79,002 ಮತಗಳನ್ನು ಪಡೆದುಕೊಂಡಿದ್ದು, ಡಿಕೆ ಸುರೇಶ್ ಅವರ 8,09,355 ಮತಗಳನ್ನು ಪಡೆದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.