ಮನೆ ಆರೋಗ್ಯ ರಾಜ್ಯದಲ್ಲಿ ದಾವುಗಾಲಿಟ್ಟಿರುವ ನಕಲಿ ವೈದ್ಯರ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್ ನಕಲಿ ವೈದ್ಯಕೀಯ ಹಾವಳಿ...

ರಾಜ್ಯದಲ್ಲಿ ದಾವುಗಾಲಿಟ್ಟಿರುವ ನಕಲಿ ವೈದ್ಯರ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್ ನಕಲಿ ವೈದ್ಯಕೀಯ ಹಾವಳಿ ತಡೆಗೆ ಕಲರ್ ಕೋಡ್

0

ಬೆಂಗಳೂರು:  ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ದಿಟ್ಟ  ಹೆಜ್ಜೆ ಇಟ್ಟಿದೆ.

Join Our Whatsapp Group

ಎಂಬಿಬಿಎಸ್ ಪದವಿ ಮುಗಿಸದೇ ಕ್ಲಿನಿಕ್ ನಡೆಸುತ್ತಿರುವ ಹಲವು ನಕಲಿ ವೈದ್ಯರ ಬಗ್ಗೆ ಇತ್ತೀಚಿಗೆ ದೂರುಗಳು ದಾಖಲಾಗುತ್ತಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ 1434 ಕ್ಕೂ ಹೆಚ್ಚು ನಕಲಿ ವೈದ್ಯರ ಮೇಲೆ ಪ್ರಕರಣ ದಾಖಲು ಮಾಡಿತ್ತು.

ದೊಡ್ಡ ಸಂಖ್ಯೆಯಲ್ಲಿ ನಕಲಿ ವೈದ್ಯರು ಹುಟ್ಟಿಕೊಳ್ಳಲು ಇಲಾಖೆಯ ಕೆಲ ಹಿರಿಯ ಅಧಿಕಾರಿಗಳು ಸಹಕರಿಸಿದ್ದಾರೆ ಎಂಬ ಆರೋಪವಿದೆ. ಅಲೋಪಥಿ, ನ್ಯಾಚರೋಪಥಿ ಅಯುರ್ವೇದ ಹಾಗೂ ಹೋಮಿಯೋಪಥಿ ಹೆಸರಿನಲ್ಲಿ ದಂಧೆ ನಡೆಸುತ್ತಿರುವ ನಕಲಿ ವೈದ್ಯರ ಪಟ್ಟಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿತ್ತು. ಇತ್ತೀಚಿಗೆ ಭ್ರೂಣಹತ್ಯೆ  ಪ್ರಕರಣಗಳು ಹಾಗೂ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ದಾಳಿ ನಡೆಸಿ ಕ್ರಮ ಕೈಗೊಂಡಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಲಾಖೆ ಸಂಪೂರ್ಣವಾಗಿ ನಕಲಿ ವೈದ್ಯರ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿದೆ.

ನಕಲಿ ವೈದ್ಯಕೀಯ ಹಾವಳಿ ತಡೆಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಅದರನ್ವಯ ಅಲೋಪಥಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಜೊತೆಗೆ ಇನ್ನಿತರ ಕ್ರಮಗಳನ್ನು ಸೂಚಿಸಲಾಗಿದೆ. ಇದನ್ನು ತಪ್ಪಿದರೆ ಕಾನೂನು ಕ್ರಮ ಕೈಗೊಳ್ಳಲಾಗಿರುವುದು ಎಂದು ಆದೇಶಿಸಲಾಗಿದೆ.

ಬಣ್ಣ ಸಂಹಿತೆ ಕಡ್ಡಾಯ; ತಪ್ಪಿದರೆ ಕಾನೂನು ಕ್ರಮ

ಅಲೋಪಥಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ ಕೆಪಿಎಂಇ ತಿದ್ದುಪಡಿ ಕಾಯ್ದೆ 2017 ರ ಸೆಕ್ಷನ್ 19(5) ರ ಅನ್ವಯ ಕಾರಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.