ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಪ್ರಕರಣ ಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆ ಕೆ.ಆರ್.ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸೇರಿ ಮೂವರನ್ನ ಅಮಾನತು ಮಾಡಲಾಗಿದೆ.
ಇನ್ಸ್ ಪೆಕ್ಟರ್ ಸಂತೋಷ್ , ಎಎಸ್ ಐ ಗಿರೀಶ್ , ಹೆಡ್ ಕಾನ್ಸ್ ಟೇಬಲ್ ರಾಘವೇಂದ್ರ ಮೂವರು ಪೊಲೀಸ್ ಸಿಬ್ಬಂದಿಗಳನ್ನ ಅಮಾನತು ಮಾಡಿ IG ಅಮಿತ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ. ಆತ್ಮಹತ್ಯೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪದ ಮೇಲೆ ಸಸ್ಪೆಂಡ್ ಮಾಡಲಾಗಿದೆ.
ಆರೋಪಿ ಲೋಕೇಶ್ ಯುವತಿ ನಗ್ನ ಚಿತ್ರ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆಂದು ಆರೋಪಿಸಿ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ ದೂರು ನೀಡಿತ್ತು. ಈ ಬಗ್ಗೆ ಠಾಣೆಗೆ ದೂರು ನೀಡಿದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಮಧ್ಯೆ ಕುಟುಂಬದ ನಾಲ್ವರು ಮಲೇ ಮಹದೇಶ್ವರ ಬೆಟ್ಟದ ಬಳಿಯ ತಾಳಬೆಟ್ಟದಲ್ಲಿ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ನಾಲ್ವರ ಪೈಕಿ ಓರ್ವ ಸಾವನ್ನಪ್ಪಿದ್ದರು. ಪೊಲೀಸರ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಮೂವರನ್ನು ಅಮಾನತು ಮಾಡಲಾಗಿದೆ.
ಆರೋಪಿ ಲೋಕೇಶ್ ಬಂಧನ
ಮಲೆಮಹದೇಶ್ವರ ಬೆಟ್ಟದ ತಾಳಬೆಟ್ಟದಲ್ಲಿ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲೋಕೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಚೀರನಹಳ್ಳಿ ಗ್ರಾಮದ ಆರೋಪಿ ಲೋಕೇಶ್ ನನ್ನು ಮಳವಳ್ಳಿ ಸಂಬಂಧಿಕರ ಮನೆಯಲ್ಲಿ ಮಳವಳ್ಳಿ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. SC/ST ದೌರ್ಜನ್ಯ ಕಾಯ್ದೆ, ಪೋಕ್ಸೋ ಹಾಗೂ IPC 370 ಅಡಿ ಆರೋಪಿ ವಿರುದ್ದ ಪೊಲೀಸರು ಪ್ರತ್ಯೇಕ ಕೇಸ್ ದಾಖಲಿಸಿದ್ದಾರೆ. ಅಪ್ರಾಪ್ತೆ ಜೊತೆಯಿದ್ದ ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಮಾಡುವುದಾಗಿ ಆರೋಪಿ ಲೋಕೇಶ್ ಬೆದರಿಕೆ ಹಾಕಿದ್ದನು ಎನ್ನಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.