ಕೊಚ್ಚಿ: 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾಲಿವುಡ್ ನಟರೊಬ್ಬರ ಮೇಲೆ ಕೇಸ್ ದಾಖಲಾಗಿದೆ.
ಕೇರಳದ ಕೋಝಿಕ್ಕೋಡ್ನಲ್ಲಿ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ನಟ ಕೂಟಿಕಲ್ ಜಯಚಂದ್ರನ್ ವಿರುದ್ಧ ಕೇಳಿಬಂದಿದ್ದು, ಇದೀಗ ಸ್ಥಳೀಯ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಕಸಬಾ ಪೊಲೀಸರು ಜಯಚಂದ್ರನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ತಮ್ಮ ಕುಟುಂಬದೊಳಗಿರುವ ವಿವಾದದ ಲಾಭ ಪಡೆದು ನಟ ತನ್ನ ನಾಲ್ಕು ವರ್ಷದ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಮಗುವಿನ ತಾಯಿ ದೂರಿನಲ್ಲಿ ಹೇಳಿದ್ದಾರೆ.
ದೂರಿನನ್ವಯ ಕಸಬಾ ಪೊಲೀಸರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಿರ್ದೇಶನದಂತೆ ದೂರುದಾರರ ಮನೆಗೆ ಭೇಟಿ ನೀಡಿ ಮಗುವಿನ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಸದ್ಯ ಈ ಬಗ್ಗೆ ನಟ ಜಯಚಂದ್ರನ್ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಪೊಲೀಸರು ದೂರು ದಾಖಲಿಸಿದ್ದು, ಇನ್ನಷ್ಟೇ ಕ್ರಮಕೈಗೊಳ್ಳಬೇಕಿದೆ.
ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.
ಮಾಲಿವುಡ್ ನಟನಾಗಿ ಕಾಲಿಡುವ ಮುನ್ನ ಮಿಮಿಕ್ರಿ ಆರ್ಟಿಸ್ಟ್ ಆಗಿ ಗುರುತಿಸಿಕೊಂಡಿದ್ದರು. ಕಿರುತೆರೆಯಲ್ಲೂ ಕಾಣಿಸಿಕೊಂಡಿದ್ದ ಅವರು, ʼದೃಶ್ಯಂʼ ಸಿನಿಮಾ ಸೇರಿದಂತೆ ʼನಜಾನ್ʼ,ಓರು ಸೆಕೆಂಡ್ ಕ್ಲಾಸ್ ಯಾತ್ರಾ, ʼಲಕ್ಷ್ಯಮ್ʼ, ʼನಾರದನ್ʼ, ʼಮೈಬಾಸ್ʼ, ʼಡಿಟೆಕ್ಟಿವ್ʼ ಸೇರಿದಂತೆ ಹಲವಾರು ಸಿನಿಮಾದಲ್ಲಿ ನಟಿಸಿದ್ದಾರೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.