ಮನೆ ಆರೋಗ್ಯ ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಭರವಸೆ: ಆರೋಗ್ಯ ಸಚಿವ ಸುಧಾಕರ್‌ ಮನವಿಗೆ ಸಕಾರಾತ್ಮಕ ಸ್ಪಂದನೆ

ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಭರವಸೆ: ಆರೋಗ್ಯ ಸಚಿವ ಸುಧಾಕರ್‌ ಮನವಿಗೆ ಸಕಾರಾತ್ಮಕ ಸ್ಪಂದನೆ

0

ಹೊಸದಿಲ್ಲಿ/ಬೆಂಗಳೂರು : ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.

ಕಾರ್ಮಿಕ ಸಚಿವಾಲಯದಲ್ಲಿ ನಡೆದ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಖಾತೆ  ಸಚಿವ ಭೂಪೇಂದ್ರ ಸಿಂಗ್‌ ಯಾದವ್‌ ಅವರು, ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡುವ ಪ್ರಕ್ರಿಯೆಗೆ ತಕ್ಷಣವೇ ಚಾಲನೆ ನೀಡುವಂತೆ ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉನ್ನತ ಮಟ್ಟದ ಸಭೆಗೂ ಮುನ್ನ ಸಚಿವ ಯಾದವ್‌ ಅವರನ್ನು ಭೇಟಿ ಮಾಡಿದ್ದ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು ಆಸ್ಪತ್ರೆ ಆರಂಭಿಸುವಂತೆ ಮನವಿ ಸಲ್ಲಿಸಿದರು.

ರಾಜಧಾನಿ  ಬೆಂಗಳೂರಿಗೆ ಹೊಂದಿಕೊಂಡಂತಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿ  ಕಾರ್ಮಿಕರು ಮತ್ತು ಅವರ ಅವಲಂಬಿತರಿದ್ದಾರೆ.  ಅವರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸುವ ನಿಟ್ಟಿನಲ್ಲಿ ಇಎಸ್‌ಐ ಆಸ್ಪತ್ರೆ ಅಗತ್ಯವಿದೆ. ಹೀಗಾಗಿ ತಕ್ಷಣವೇ ಆಸ್ಪತ್ರೆಗೆ ಮಂಜೂರಾತಿ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಸಚಿವ ಸುಧಾಕರ್ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಯಾದವ್‌ ಕೂಡಲೇ ತಮ್ಮ ಸಚಿವಾಲಯದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

 ಜಿಲ್ಲೆಗೆ ಇಎಸ್ಐ ಆಸ್ಪತ್ರೆ ಮಂಜೂರು ಮಾಡುವ ಭರವಸೆ ಸಿಕ್ಕಿದೆ. ದೊಡ್ಡ ಸಂಖ್ಯೆಯಲ್ಲಿರುವ ಕಾರ್ಮಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸಲು ಸಾಧ್ಯವಾಗುತ್ತದೆ

– ಡಾ. ಕೆ. ಸುಧಾಕರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು

ಆದ್ಯತೆ ಮೇರೆಗೆ  ಒಪ್ಪಿಗೆ

ಸಚಿವ ಸುಧಾಕರ್‌ ಅವರ ಮನವಿಗೆ ಸಭೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಯಾದವ್‌ ಅವರು, ರಾಜ್ಯದ ಪ್ರಸ್ತಾವನೆಯನ್ನು ಪರಿಗಣಿಸಲಾಗಿದೆ. ಆದ್ಯತೆ ಮೇರೆಗೆ ಅನುಮತಿ ನೀಡಲಾಗುವುದು. ಚಿಕ್ಕಬಳ್ಳಾಪುರಕ್ಕೆ ಇಎಸ್‌ಐ ಆಸ್ಪತ್ರೆಯ ಅಗತ್ಯತೆ ತಮಗೂ ಮನರಿಕೆ ಆಗಿದ್ದ, ತಕ್ಷಣವೇ ಆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.