ಮನೆ ಸುದ್ದಿ ಜಾಲ ನ್ಯಾ.ನಾಗಮೋಹನ್‌ದಾಸ್ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ನ್ಯಾ.ನಾಗಮೋಹನ್‌ದಾಸ್ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

0

ಚಾಮರಾಜನಗರ (Chamrajnagar)- ನ್ಯಾಯಾಮೂರ್ತಿ ನಾಗಮೋಹನ್‌ದಾಸ್ ವರದಿ ಜಾರಿಗೆ ಆಗ್ರಹಿಸಿ ನಾಯಕ ಸಮುದಾಯದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿಮಂದಿರ ಆವರಣದಲ್ಲಿ  ಸಮಾವೇಶಗೊಂಡ ಪ್ರತಿಭಟನಾನಿತರರು ಅಲ್ಲಿಂದ ಮೆರವಣಿಗೆ ಹೊರಟು ದೊಡ್ಡಂಗಡಿ ಬೀದಿ, ಚಿಕ್ಕಂಗಡಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತಕ್ಕೆ ತೆರಳಿ ಅಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಿ, ನಂತರ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರ ಮೂಲಕ ಮುಖ್ಯಮಂತ್ರಿ ಬಸವರಾಜು ಎಸ್.ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ನಾಯಕ ಜನಾಂಗದ ಮುಖಂಡ ಪು.ಶ್ರೀನಿವಾಸನಾಯಕ ಮಾತನಾಡಿ,  ಕಳೆದ ೧೦೦ ದಿನಗಳಿಂದಲ್ಲೂ ನ್ಯಾ.ನಾಗಮೋಹನ್ ದಾಸ್ ವದರಿ ಜಾರಿಗೊಳಿಸುವಂತೆ ಜನಾಂಗದ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು  ಬೆಂಗಳೂರಿನ ಫ್ರೀಢಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಸೌಜನ್ಯಕ್ಕಾದರೂ ಮುಖ್ಯಮಂತ್ರಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿಲ್ಲ ಶ್ರೀಗಳ ಹೋರಾಟವನ್ನು ಬೆಂಬಲಿಸಿ ಇಡೀ ರಾಜ್ಯಾಧ್ಯಂತ ಎಲ್ಲ ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನೆಡಸಲಾಗುತ್ತಿದ್ದು, ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಸರ್ಕಾರ ನ್ಯಾ. ನಾಗಮೋಹನ್ ದಾಸ್ ವರದಿ ಜಾರಿಗೆ ತರದಿದ್ದರೆ  ಜನ, ಜಾನುವಾರುಗಳೊಂದಿಗೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಮಾಜಿ ಸದಸ್ಯರಾದ ಎಸ್.ಸೋಮನಾಯಕ, ರಮೇಶ್, ತಾ.ಪಂ.ಮಾಜಿ ಅಧ್ಯಕ್ಷ ಹೆಚ್.ವಿ.ಚಂದ್ರು, ಪಾಳ್ಯ ಜಯಸುಂದರ್, ನಿವೃತ್ತ ಅಭಿಯಂತರಾದ ರಂಗರಾಮನಾಯಕ, ಯ.ರಾಜುನಾಯಕ, ನಗರಸಭಾ ಸದಸ್ಯರಾದ ಶಿವರಾಜ್ ಮತ್ತಿತರರು ಉಪಸ್ಥಿತರಿದ್ದರು.