ಬೆಂಗಳೂರು: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ.
ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.
ಪೊಲೀಸರು ಸಲ್ಲಿಸಿದ್ದ ಅರ್ಜಿ ಮನ್ನಿಸಿದ ಕೋರ್ಟ್ ಯಡಿಯೂರಪ್ಪಗೆ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಇನ್ನು ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ಸಿಆರ್ಪಿಸಿ 41ಎ ಅಡಿ ಮಾ.28ರಂದು ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಏ.12ರಂದು ಬಿಎಸ್ವೈ ವಿಚಾರಣೆಗೆ ಹಾಜರಾಗಿದ್ದರು. 2ನೇ ನೋಟಿಸ್ಗೆ ಅವರು ಹಾಜರಾಗಿಲ್ಲ. ಜೂ.17ರಂದು ಹಾಜರಾಗುವುದಾಗಿ ಬಿಎಸ್ವೈ ಉತ್ತರಿಸಿದ್ದಾರೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಎಫ್ಐಆರ್ ನಂತರ ತನಿಖೆ ಯಾವಾಗ ಆರಂಭವಾಯಿತು ಎಂದು ಹೈಕೋರ್ಟ್ ಪ್ರಶ್ನಿಸಿದ್ದು, ಮಾರ್ಚ್ 14ರ ಎಫ್ಐಆರ್ ನಂತರ ಏ.12ರಂದು ನೋಟಿಸ್ ನೀಡಿದ್ದಾರೆ. ಅಲ್ಲಿಯವರೆಗೆ ಪೊಲೀಸರು ಏನು ಮಾಡಿದರೆಂಬುದು ತಿಳಿದಿಲ್ಲ ಎಂದು ಸಿ.ವಿ.ನಾಗೇಶ್ ವಾದಿಸಿದರು.
ಈಗ ಬಿಎಸ್ವೈ ಬಂಧನ ಏಕೆ ಬೇಕಾಗಿದೆ ಎಂದು ಹೈಕೋರ್ಟ್ ಮರು ಪ್ರಶ್ನಿಸಿದ್ದು, ಜೂನ್ 12ರಂದು ಹಾಜರಾಗುವಂತೆ ಬಿಎಸ್ವೈಗೆ ನೋಟಿಸ್ ನೀಡಲಾಗಿತ್ತು. ಮೊಬೈಲ್‌ನಲ್ಲಿದ್ದ ವಿಡಿಯೋ, ಧ್ವನಿ ಪರೀಕ್ಷೆ ನಂತರ ನೋಟಿಸ್ ನೀಡಲಾಯಿತು. ಹಾಜರಾಗದ ಕಾರಣಕ್ಕೆ ಬಂಧನದ ವಾರಂಟ್ ಪಡೆಯಲಾಗಿದೆ. ಮೇ 13ರಂದು ಎಫ್ಎಸ್ಎಲ್ ವರದಿ ಬಂದಿದೆ. ಸುಟ್ಟ ಮೊಬೈಲ್ ಚಿಪ್ನಲ್ಲಿದ್ದ ಡಾಟಾ ತೆಗೆಯಲು ಗುಜರಾತ್ FSLಗೆ ಕಳುಹಿಸಲಾಯಿತು. ಅದಾದ ನಂತರ ಧ್ವನಿ ಪರೀಕ್ಷೆಗೆ ಬೆಂಗಳೂರು ಎಫ್ಎಸ್ಎಲ್ಗೆ ಕಳುಹಿಸಲಾಯಿತು ಎಂದು ಹೈಕೋರ್ಟ್ಗೆ ಎಡಿಜಿಪಿ ಬಿ.ಕೆ.ಸಿಂಗ್ ಹೇಳಿದ್ದಾರೆ.
ಬಿಎಸ್ವೈ ಮನೆಯಲ್ಲಿಯೇ ಈ ಘಟನೆ ನಡೆದಿದೆ. ಅವರ ಮನೆಯಲ್ಲಿನ ಸಿಸಿ ಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ತನಿಖೆ ಹೇಗೆ ನಡೆಸಬೇಕೆಂಬುದನ್ನ ತನಿಖಾಧಿಕಾರಿ ನಿರ್ಧರಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ತನಿಖೆಗೆ ತಡೆ ನೀಡುವಂತೆ ಬಿಎಸ್ ವೈ ಪರ ವಕೀಲರು ಮನವಿ ಮಾಡಿದ್ದಾರೆ. ಪೊಲೀಸರು ದುರುದ್ದೇಶದ ತನಿಖೆ ನಡೆಸುತ್ತಿರುವುದು ಗೊತ್ತಾಗುತ್ತಿದೆ. ಜೂ.12 ರಂದು ಹಾಜರಾಗಿದ್ದರೆ ಬಂಧಿಸುತ್ತಿದ್ದರೆಂದು ಎಜಿ ಹೇಳುತ್ತಿದ್ದಾರೆ. ಇದು ದುರುದ್ದೇಶದ ಕ್ರಮವೆಂದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಸಿವಿ ನಾಗೇಶ್ ವಾದ ಮಂಡಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.