ಮನೆ ಅಪರಾಧ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ

0

ರಾಮನಗರ: ತಾಲೂಕಿನ ಕಪನಯ್ಯನದೊಡ್ಡಿ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

Join Our Whatsapp Group

ಖಾಸಗಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾದ ವಿಶ್ವ (21) ಮತ್ತು ಸೂರ್ಯ (21) ಮೃತರು. ಚಾಲಕ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಗಳು ಸಹಪಾಠಿಗಳಾಗಿದ್ದು, ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವಾಗ ರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದೆ.

ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಲಾರಿ ಮುಂಭಾಗ ಜಖಂಗೊಂಡಿದೆ. ಮೃತರ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಶವಗಳನ್ನು ರಾಮನಗರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.