ಮನೆ ಅಪರಾಧ ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ: ಭಜರಂಗದಳ ಪ್ರತಿಭಟನೆ

ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ: ಭಜರಂಗದಳ ಪ್ರತಿಭಟನೆ

0

ಧಾರವಾಡ : ಗೋವು ರಕ್ಷಣೆಗಾಗಿ ತೆರಳಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರ ಮೇಲೆ ೩೦ ಕ್ಕು ಹೆಚ್ಚು ಮುಸ್ಲಿಂ ಯುವಕರ ಗುಂಪು ದಾಳಿ ಮಾಡಿದ ಘಟನೆ ಶುಕ್ರವಾರ ಸಂಜೆ ಧಾರವಾಡದ ಎಪಿಎಂಸಿ ಬಳಿ ನಡೆದಿದೆ.

Join Our Whatsapp Group

ಸೋಮಶೇಖರ್ ಚೆನ್ನಶೆಟ್ಟಿ ಎಂಬುವವರ ಮೇಲೆ ಮುಸ್ಲಿಂ ಹುಡುಗರ ಗುಂಪು ಹಲ್ಲೆ ನಡೆಸಿದ್ದು, ಈ ಆರೋಪಿಗಳನ್ನು ಬಂಧನ ಮಾಡುವಂತೆ ಆಗ್ರಹಿಸಿ ಧಾರವಾಡ ಉಪ ನಗರ ಪೊಲೀಸ್ ಎದುರು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಶುಕ್ರವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು.

ಧಾರವಾಡ ಹಳೇ ಎಪಿಎಂಸಿಯಲ್ಲಿ ಅಕ್ರಮವಾಗಿ ಕಟ್ಟಿದ್ದ ಹಸುಗಳನ್ನು ರಕ್ಷಣೆ ಮಾಡಲು ಹೋಗಿದ್ದ ಸೋಮಶೇಖರ್ ಚನ್ನಶೆಟ್ಟಿ ಮೇಲೆ ೩೦ಕ್ಕೂ ಹೆಚ್ಚು ಮುಸ್ಲಿಂ ಯುವಕರಿಂದ ಹಲ್ಲೆ ಮಾಡಲಾಗಿದೆ. ಹೀಗಾಗಿ ಆರೋಪಗಳನ್ನು ಶೀಘ್ರವಾಗಿ ಬಂಧಿಸಿ, ಕ್ರಮ ಜರಿಗಿಸುವಂತೆ ಒತ್ತಾಯಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದರು.‌

ರಾಜ್ಯದಲ್ಲಿ ಗೋವು ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೂ ಗೋವು ಹತ್ಯೆ ಮಾಡಲು ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ. ಈ ಕುರಿತು ಮಾಹಿತಿ ಪಡೆದುಕೊಂಡು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಲು ಮುಂದಾದ ಸಂದರ್ಭದಲ್ಲಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರ ಜಿಹಾದಿಗಳಿಗೆ ಹಾಗೂ ಗೋವು ಹತ್ಯೆ ನಡೆಸುವವರಿಗೆ ರಕ್ಷಣೆ ನೀಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಮಾಡದೇ ಕೂಡಲೇ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವೇ ನಾವು ಯಾವುದೇ ಕಾರಣಕ್ಕೂ ಹೋರಾಟ ಕೈಬಿಡುವುದಿಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಆದರೂ ಕಾರ್ಯಕರ್ತರು ಪಟ್ಟು ಸಡಿಲಿಸಲಿಲ್ಲ.

ಶಾಸಕ ಬೆಲ್ಲದ ದೌಡು : ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಶಾಸಕ ಅರವಿಂದ ಬೆಲ್ಲದ ಅವರು, ಗೋವು ರಕ್ಷಣೆಗೆ ತೆರಳಿದ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ತಪ್ಪಿತಸ್ಥ ಎಲ್ಲ ಆರೋಪಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಶೀಘ್ರವಾಗಿ ಬಂಧಿಸಬೇಕು. ಇಲ್ಲವಾದಲ್ಲಿ ಶನಿವಾರ ಮತ್ತೆ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆ ನೀಡಿದರು.

ಶೀಘ್ರವಾಗಿ ಕ್ರಮ ಜರುಗಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದು ಅಲ್ಲಿಂದ ನಿರ್ಗಮಿಸಿದರು.

ಮಾಜಿ ಶಾಸಕರು ಅಮೃತ ದೇಸಾಯಿ, ಹಿಂದೂ ಕಾರ್ಯಕರ್ತ ಶಿವಾನಂದ ಸತ್ತಿಗೆರಿ, ಸಂಜಯ ಕಪಟಕರ, ಶಿವು ಹೀರೆಮಠ, ವಿಜಯಾನಂದ ಶಟ್ಟಿ, ಮೋಹನ ರಾಮದುರ್ಗ, ಸುರೇಶ ಬೆದರೆ, ಪ್ರಮೋದ ಕಾರಕುನ, ಜೋತಿ ಪಾಟೀಲ, ಗೀತಾ ಪಾಟಿಲ, ಇತರಿದ್ದರು.