ಮೈಸೂರು: ಯೋಗವನ್ನು ಕೇವಲ ಒಂದು ದಿನ ಮಾತ್ರ ಮಾಡಿದರೆ ಸಾಲದು ಇದೊಂದು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂಬುದು ಆಯುಷ್ಯ ಇಲಾಖೆಯ ಮೂಲ ಉದ್ದೇಶ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪ ಅವರು ತಿಳಿಸಿದರು.
ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಎಸ್ಪಿವೈಎಸ್ಎಸ್ ಮೈಸೂರು ಇವರ ಸಹಯೋಗದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ 20 ರವರೆಗೆ ಯೋಗೋತ್ಸವ ಕಾರ್ಯಕ್ರಮವನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಯೋಗದ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಎಲ್ಲಾ ತಾಲೂಕುಗಳಲ್ಲಿ ಯೋಗ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.
![](https://savaltv.com/wp-content/uploads/2024/06/WhatsApp-Image-2024-06-15-at-11.28.53-AM-1024x682.jpeg)
2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇಂದು ಎಸ್ಪಿವೈಎಸ್ಎಸ್ ವತಿಯಿಂದ ಯೋಗ ತರಬೇತಿಯನ್ನು ಪಡೆದು ಜೂನ್ 21ರಂದು ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪಾಲ್ಗೊಂಡು ಯೋಗ ಮಾಡಲಿದ್ದಾರೆ. ಯೋಗದ ಅರಿವನ್ನು ಮೂಡಿಸುವ ಹಿನ್ನೆಲೆಯಲ್ಲಿ ಇಂದು ಯೋಗೋತ್ಸವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದೇವೆ ಎಂದು ಹೇಳಿದರು.
ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ವಿಶ್ವನಾಥ್ ಅವರು ಮಾತನಾಡಿ, ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಇಂದು ಪೂರ್ವಭಾವಿ ಯೋಗಭ್ಯಾಸವು ಬಹಳ ಯಶಸ್ವಿಯಾಗಿ ನಡೆದಿದೆ. ಜೂನ್ 21 ಮಹತ್ವ ದಿನ. ಭಾರತದಿಂದ ಆರಂಭವಾದ ಯೋಗವನ್ನು ಇಂದು ಪ್ರಪಂಚಾದ್ಯಂತ ಯೋಗ ದಿನವನ್ನು ಆಚರಣೆ ಮಾಡುತ್ತಿದ್ದಾರೆ. ಯೋಗದಿಂದ ಬಹಳ ಉಪಯೋಗವಿದೆ ಹಾಗಾಗಿ ಎಲ್ಲರೂ ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಕೆ ಬಸವರಾಜು, ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಜಮೀಲ್, ನಿವೃತ್ತ ಕೆಎಎಸ್ ಅಧಿಕಾರಿ ರವಿಕುಮಾರ್, ಡಾ.ಯತೀಶ್ ಸತ್ಯನಾರಾಯಣ್ ಸೇರಿದಂತೆ ಆಯುಷ್ ಇಲಾಖೆಯ ಅಧಿಕಾರಿಗಳು ಹಾಗೂ ಯೋಗ ತರಬೇತಿದಾರರು ಉಪಸ್ಥಿತರಿದ್ದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.