ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಪೊಲೀಸರ ಪರವಾಗಿ ವಿಶೇಷ ಅಭಿಯೋಜಕ (SPP) ಪ್ರಸನ್ನ ಕುಮಾರ್ ನ್ಯಾಯಾಲಯದಲ್ಲಿ ವಾದ ಮಂಡಸಿದರು. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ಹಾಗೂ ವಿಚಾರಣೆಯ ಅವಶ್ಯಕತೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಅಸಲಿಗೆ ಒಂಬತ್ತು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡುವಂತೆ ಕೋರಲಾಗಿತ್ತು. ಆದರೆ ಇದಕ್ಕೆ ದರ್ಶನ್ ಪರ ಹಾಗೂ ಪವಿತ್ರಾ ಗೌಡ ಅವರ ವಕೀಲರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಎರಡೂ ಕಡೆಯವರ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪೊಲೀಸ್ ಕಸ್ಟಡಿ ಅವಧಿಯನ್ನು ನಟ ದರ್ಶನ್ ಮತ್ತು ಪವಿತ್ರಾಗೌಡ ಸೇರಿ 13 ಆರೋಪಿಗಳನ್ನ ಜೂನ್ 20 ರವರೆಗೆ ಅಂದರೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಆರೋಪಿಗಳಾದ ನಟ ದರ್ಶನ್ , ಪವಿತ್ರಾಗೌಡ, ಪವನ್, ರಾಘವೇಂದ್ರ, ನಂದೀಶ, ಜಗದೀಶ್ , ಅನುಕುಮಾರ, ವಿನಯ್ , ಲಕ್ಷ್ಮಣ್ , ದೀಪಕ್, ಪ್ರದೋಶ್ ಸೇರಿ 13 ಆರೋಪಿಗಳನ್ನ ಕಸ್ಟಡಿಗೆ ನೀಡಲಾಗಿದೆ ಎನ್ನಲಾಗಿದೆ.