ಮನೆ ಉದ್ಯೋಗ ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಮಹಾನಗರ ಪಾಲಿಕೆಗಳು (ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಾಮಾನ್ಯ ನೇಮಕಾತಿ) ನಿಯಮಗಳ, 2011 ರಂತೆ ಮೈಸೂರು ಮಹಾನಗರ ಪಾಲಿಕೆಗೆ ಮಂಜೂರಾಗಿರುವ ಪೌರಕಾರ್ಮಿಕ ಹುದ್ದೆಗಳ ಪೈಕಿ ನೇರ ನೇಮಕಾತಿಯಡಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳಿಗೆ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ( ರಾಜ್ಯದ ಪಾಲಿಕೆಗಳ ಪೌರ ಕಾರ್ಮಿಕರ ನೇಮಕಾತಿ) (ವಿಶೇಷ) ನಿಯಮಗಳು 2022ರ ರೀತ್ಯಾ ಹಾಗೂ ಸರ್ಕಾರದ ಆದೇಶ ಸಂಖ್ಯೆ ನಂ ಇ171 ಎಂಎನ್‍ ಇ 2022 (ಇ), ದಿನಾಂಕ 9.03.2023 ರಂತೆ ರಾಜ್ಯ ಮಹಾನಗರ ಪಾಲಿಕೆಗಳಿಗೆ (ಬಿಬಿಎಂಪಿ ಹೊರತುಪಡಿಸಿ) ಸಂಖ್ಯಾತಿರಕ್ತ ಹುದ್ದೆಗಳನ್ನು ಹೊಸದಾಗಿ ಸೃಜಿಸಿ ಆದೇಶ ಹೊರಡಿಸಲಾಗಿದೆ.

Join Our Whatsapp Group

ಅಂತೆಯೇ ಮೈಸೂರು ಮಹಾನಗರ ಪಾಲಿಕೆಗೆ 252 ಪೌರಕಾರ್ಮಿಕರ ಸಂಖ್ಯಾತಿರಕ್ತ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಅದರಂತೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗಧಿತ ಸಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಪ್ರಾರಂಭಿಕ ದಿನಾಂಕ 18-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2024

ಅರ್ಜಿ ನಮೂನೆಯನ್ನು ಸಯ್ಯಾಜಿರಸ್ತೆಯಲ್ಲಿರುವ ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಪಡೆಯಬಹುದು.

ಹುದ್ದೆಗಳ ವಿವರ

ಒಟ್ಟು ಹುದ್ದೆಗಳು:252

ವೇತನ: 17000-28950

ವಿದ್ಯಾರ್ಹತೆ/ ಅರ್ಹತೆಗಳು:

ವಿದ್ಯಾರ್ಹತೆ ಅನ್ವಯಿಸುವುದಿಲ್ಲ.

ಕನ್ನಡ ಮಾತನಾಡಲು ಬಲ್ಲವರಾಗಿರಬೇಕು.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರಪಾವತಿ/ದಿನಗೂಲಿ/ಕ್ಷೇಮಾಭಿವೃದ್ಧಿ ಅಧಿನಿಯಮ/ ಸಮಾನ ಕೆಲಸಕ್ಕೆ ಸಮಾನ ವೇತನದಡಿ ಪೌರಕಾರ್ಮಿಕ ಹುದ್ದೆಯಲ್ಲಿ ಕನಿಷ್ಠ ಎರಡು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮಗಳು ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಮಾತ್ರ ಅರ್ಹರಿರುತ್ತಾರೆ.

ಅರ್ಜಿ ಸಲ್ಲಿಸಲು ಸಕಾರ ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ  18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 55 ವರ್ಷ

ಮೀಸಲಾತಿ ವಿವರ

ಪ.ಜಾತಿ: 43

ಪ.ಪಂ.: 18

ಪ್ರ-1: 10

ಪ್ರ-2(ಎ): 38

ಪ್ರ- 2(ಬಿ): 11

ಪ್ರ-3(ಎ): 10

ಪ್ರ-3(ಬಿ): 11

ಸಾ.ಆ: 111

ಒಟ್ಟು: 252

ಅರ್ಜಿ ಸಲ್ಲಿಸುವುದು ಹೇಗೆ ?

ಅಧಿಸೂಚನೆ ಪ್ರತಿಯನ್ನು ಹಾಗೂ ನಿಗಧಿತ ಅರ್ಜಿ ನಮೂನೆಯನ್ನು ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಿಂದ ಪಡೆದು ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಭರ್ತಿ ಮಾಡುವುದು.

ಅಭ್ಯರ್ಥಿಯು ತನ್ನ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೆ ಸಹಿ ಅಥವಾ ಎಡಗೈ ಹೆಬ್ಬೆಟ್ಟಿನನ ಗುರುತು ಮಾಡುವುದು ಹಾಗೂ ಅರ್ಜಿಯ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ/ಹೆಬ್ಬಟ್ಟಿನ ಗುರುತು ಮಾಡುವುದು, ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸು ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಸಕ್ಷಮ ಪ್ರಾಧಿಕಾರಿಗಳಿಂದ ಪಡೆದು, ಅವುಗಳ ನಕಲು ಪ್ರತಿಗಳನ್ನು ಸಂಬಂಧಪಟ್ಟ ಶಾಖಾ ಮುಖ್ಯಸ್ಥರಿಂದ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿಯನ್ನು ಅಧ್ಯಕ್ಷರು, ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಆಯುಕ್ತರು ಮೈಸೂರು ಮಹಾನಗರ ಪಾಲಿಕೆ ಮೈಸೂರು ಇವರಿಗೆ 18-07-2024ರ ಸಂಜೆ 5-30 ಗಂಟೆಯೊಳಗೆ ನೇರವಾಗಿ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು. ಅಂಚೆ ಮೂಲಕ ಅಥವಾ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅವಧಿ/ಸಮಯ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಾಲಿಕೆ ವೆಬ್ ಸೈಟ್ http://www.mysurucity.mrc.gov.in ಅಥವಾ ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಿಂದ ಪಡೆಯಬಹದಾಗಿದೆ.