ಮನೆ ರಾಷ್ಟ್ರೀಯ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

0

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್​ ಇರಿಸಲಾಗಿದೆ ಎಂದು ಇ-ಮೇಲ್ ನಲ್ಲಿ ಹೇಳಲಾಗಿದೆ.

Join Our Whatsapp Group

ಮಾಹಿತಿ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆ ನೀಡಲಾಗಿದೆ. ಭದ್ರತಾ ಸಂಸ್ಥೆ ಮತ್ತು ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಶೋಧಿಸಿದೆ. ಶೋಧ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೇಲ್ ಕಳುಹಿಸಿದವರನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ.

 ದೆಹಲಿ-ಟೊರೊಂಟೊ ಏರ್​ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ

ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ  ವಿಮಾನಕ್ಕೆ (AC43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಬೇಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ವಿಮಾನದಲ್ಲಿ 306 ಪ್ರಯಾಣಿಕರಿದ್ದರು.

ಪ್ಯಾರಿಸ್​-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈ ಬೆದರಿಕೆಯ ನಂತರ, ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿತ್ತು.

ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್‌ ನೆಸ್ ಬ್ಯಾಗ್‌ ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು.