ಮನೆ ಉದ್ಯೋಗ ಪದವೀಧರರಿಗೆ ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಪದವೀಧರರಿಗೆ ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

0

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ  400 ಹುದ್ದೆಗಳು ಖಾಲಿಯಿದ್ದು, ಅದನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Join Our Whatsapp Group

ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್‌.ಸಿ. / ಬಿ.ವಿ.ಎಸ್‌.ಸಿ ಆಯಂಡ್‌ ಎಎಚ್‌ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಂಪೂರ್ಣ ಮಾಹಿತಿ ಈ ಪಿಡಿಎಫ್​​ನಲ್ಲಿದ್ದು, ಈ pdf ಲಿಂಕ್ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಸಕ್ತರು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್‌ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್‌ 24. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (ahvs.karnataka.gov.in). ಈ ನೇಮಕಾತಿ ಗುತ್ತಿಗೆ ಆಧಾರದಲ್ಲಿ ನಡೆಯುತ್ತಿದ್ದು, ತಾತ್ಕಾಲಿಕವಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸವಾಗಿರಬೇಕು.