ಮನೆ ರಾಜ್ಯ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ

0

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಾದ್ಯಂತ ಸೋಮವಾರ ಪ್ರತಿಭಟನೆ ನಡೆಸುತ್ತಿದೆ.

Join Our Whatsapp Group

ಇಂದು ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಶಾಸಕರಾದ ಭೈರತಿ ಬಸವರಾಜ್ ಎಂಎಲ್ ಸಿ ರವಿ ಕುಮಾರ್ ಸಿ.ಟಿ ರವಿ ಭಾಗಿಯಾಗಿದ್ದಾರೆ. ಪ್ರತಿಭಟನೆ ವೇಳೆ ನಾಯಕರು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ವಿಜಯೇಂದ್ರ ಅವರು, ರಾಜ್. ಸರ್ಕಾರದ ಜನವಿರೋಧಿ ನಿಲುವಿನ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರಲಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿವೆ.

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದರೆ ಸಾರ್ವಜನಿಕರಿಂದ ಆಕ್ರೋಶಕ್ಕೆ ಕಾರಣವಾಗುತ್ತದೆ ಎಂದು ಅರಿತ ಸರ್ಕಾರ, ಈ ಗ್ಯಾರಂಟಿ ಯೋಜನೆಗಳ ಮುಂದುವರಿಸುವ ಸಲುವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು.

ಎರಡು ದಿನದ ರಾಜ್ಯ ಸರ್ಕಾರ ಪೆಟ್ರೋಲ್ ದರ 3 ರೂ. ಡೀಸೆಲ್ ದರ 3.50 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಈ ದರ ಏರಿಕೆ ನಡೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.