ಮನೆ ಸ್ಥಳೀಯ ಜುಲೈ 12 ರಂದು ಮೊದಲನೇ ಆಶಾಢ ಶುಕ್ರವಾರ: ಅಗತ್ಯ ಸಿದ್ಧತೆಗೆ ಸೂಚನೆ

ಜುಲೈ 12 ರಂದು ಮೊದಲನೇ ಆಶಾಢ ಶುಕ್ರವಾರ: ಅಗತ್ಯ ಸಿದ್ಧತೆಗೆ ಸೂಚನೆ

0

ಮೈಸೂರು: ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

Join Our Whatsapp Group

ಅವರು ಇಂದು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವರ್ಷ ಜುಲೈ 12 ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ  19 ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 26 ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 27 ರಂದು ಶನಿವಾರ ರಂದು ಶ್ರೀ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ವರ್ಧಂತಿ ಕಾರ್ಯಕ್ರಮ ಹಾಗೂ ಆಗಸ್ಟ್ 2 ರಂದು ಕೊನೆಯ ಆಷಾಢ ಶುಕ್ರವಾರಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

ಜುಲೈ ಮೊದಲ ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಜೊತೆ ಆಷಾಢ ಶುಕ್ರವಾರ ಕುರಿತು ಆಗಿರುವ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ಸಭೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಚಾಮುಂಡೇಶ್ವರಿ ಬೆಟ್ಟದಲ್ಲಿ ದಾಸೋಹ ಭವನದಲ್ಲಿ ನಡೆಯುವ ಪ್ರಸಾದ ವಿತರಣಾ ಕಾರ್ಯಕ್ರಮದ ಜೊತೆಗೆ ಭಕ್ತಾದಿಗಳು ಸಹ ಅಲ್ಲಲ್ಲಿ ಪ್ರಸಾದ ವಿತರಣೆ ಮಾಡುವುದರಿಂದ ಆಹಾರದ ಸುರಕ್ಷತೆಗೆ ಗಮನ ಕೊಡಲಾಗಿದೆ. ಆಹಾರ  ಸುರಕ್ಷತಾ ಅಧಿಕಾರಿಗಳು ಅಗತ್ಯ ವಹಿಸಬೇಕು ಎಂದು ತಿಳಿಸಿದರು.

 ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಭಕ್ತಾದಿಗಳಿಗೆ ನೀಡುವ ನೀರು ನೀಡಬೇಕು.ವಾಹನಗಳನ್ನು ಪಾರ್ಕಿಂಗ್ ಅನ್ನು ಕ್ರಮಬದ್ಧವಾಗಿ ಮಾಡಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ. ಬೆಟ್ಟಕ್ಕೆ ಬರುವವರು ಪ್ಲಾಸ್ಟಿಕ್ ಗಳನ್ನು ತರುವಂತಿಲ್ಲ ಎಂದು ತಿಳಿಸಿದರು.

ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಬೇಕು. ಚಾಮುಂಡಿ ಬೆಟ್ಟದಲ್ಲಿ ಬರುವ ಅಂಗಡಿಗಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಚಾಮುಂಡಿ ಬೆಟ್ಟದಲ್ಲಿ ಸಿಸಿಟಿವಿ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಕುಡಿಯುವ ನೀರಿನ ಆರ್ ಓ ಪ್ಲಾಂಟ್ ವ್ಯವಸ್ಥೆ ಕಲ್ಪಿಸಬೇಕು. ಇದರಿಂದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ಕಡಿಮೆ ಮಾಡಬಹುದು ಎಂದು ತಿಳಿಸಿದರು.

ಯಾವುದೇ ಪ್ಲೆಕ್ಸ್ ಬ್ಯಾನರ್ ಗಳನ್ನು ಅಳವಡಿಸುವಂತಿಲ್ಲ. ಪಾಸ್ ವ್ಯವಸ್ಥೆ ಇರುವುದಿಲ್ಲ.  ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ದರ್ಶನ ಸುಗಮವಾಗಿ ಆಗಬೇಕು. ಬರುವ ಭಕ್ತಾದಿಗಳಿಗೆ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಬೇಕು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾನ್ಹವಿ, ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ. ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.