ಮನೆ ಸುದ್ದಿ ಜಾಲ ಹಿರಿಯ ಸಾಹಿತಿ ನಾಡೋಜ ಕಮಲಾ ಹಂಪನಾ ಇನ್ನಿಲ್ಲ

ಹಿರಿಯ ಸಾಹಿತಿ ನಾಡೋಜ ಕಮಲಾ ಹಂಪನಾ ಇನ್ನಿಲ್ಲ

0

ಬೆಂಗಳೂರು: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಇಂದು (ಜೂ.22) ಮೃತಪಟ್ಟಿದ್ದಾರೆ.

Join Our Whatsapp Group

ಕಮಲಾ ಹಂ.ಪಾ ನಾಗರಾಜಯ್ಯ ಅವರಿಗೆ ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ.

ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಅಮೆರಿಕನ್​ ಡಾಲರ್ಸ್​ ಕಾಲೋನಿಯಲ್ಲಿ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ.ಎಸ್​ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕಮಲಾ ಹಂಪನ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ 1935ರ ಅಕ್ಟೋಬರ್​ 28ರಂದು ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ, ಪಿಹೆಚ್​ಡಿ ಪದವಿ ಪಡೆದರು. ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನ, ಬವನೆ ಸೇರಿದಂತೆ ಹಲವು ಕೃತಿಗಳನ್ನು ಬರೆದಿದ್ದ ಕಮಲಾ ಹಂಪನ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿ ಸಂದಿದೆ.

ಮೂಡಿಬಿದರೆಯಲ್ಲಿ ನಡೆದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಸಂದಿವೆ.

ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳಾಗಿವೆ.