ಮನೆ ಕಾನೂನು ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ​​​ನಿಷೇಧ

ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ​​​ನಿಷೇಧ

0

ಬೆಂಗಳೂರು: ಸುಗಮ ಸಂಚಾರ ಹಾಗೂ ಟ್ರಾಫಿಕ್​ ಜಾಮ್​ ನಿರ್ವಹಣೆ ಉದ್ದೇಶದಿಂದ ನಗರದ ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ವಿಧಿಸಿ ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ಆದೇಶಿಸಿದೆ.

Join Our Whatsapp Group

ಬದಲಿಯಾಗಿ ಫ್ರೀಡಂ ಪಾರ್ಕ್‌ ಬಳಿ ನಿರ್ಮಾಣವಾಗಿರುವ ಸ್ಮಾರ್ಟ್ ಪಾರ್ಕಿಂಗ್ ಕಾಂಪ್ಲೆಕ್ಸ್ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೆಜೆಸ್ಟಿಕ್, ಗಾಂಧಿನಗರ ಹಾಗೂ ಆನಂದ್ ರಾವ್ ಸರ್ಕಲ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿದರೆ ಭಾರಿ ದಂಡ ವಿಧಿಸುವ ಎಚ್ಚರಿಕೆಯನ್ನು ಸಂಚಾರಿ ಪೊಲೀಸರು ನೀಡಿದ್ದಾರೆ. ಬದಲಿಯಾಗಿ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣವನ್ನು ವಾಹನಗಳ ಮಾಲೀಕರು ಬಳಸಬಹುದಾಗಿದೆ.

ಪ್ರತಿ ಗಂಟೆಗೆ ವಾಹನ ನಿಲುಗಡೆಗೆ 20-30 ರೂ. ನಿಗದಿ ಮಾಡಲಾಗಿದೆ. ನಗರದ ಯಾವುದೇ ಭಾಗದಿಂದ ಜನರು ತಮ್ಮ ವಾಹನದಲ್ಲಿ ಬಂದರೂ ಪಾರ್ಕಿಂಗ್ ನಂತರ ವಿಧಾನಸೌಧ, ಹೈಕೋರ್ಟ್, ರೈಲ್ವೇ ನಿಲ್ದಾಣ ಸೇರಿದಂತೆ ಗಾಂಧಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋಗಲು ಉಚಿತ ಸಂಚಾರ ವ್ಯವಸ್ಥೆಯನ್ನು ಗುತ್ತಿಗೆದಾರರೇ ಮಾಡುವುದಾಗಿ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.