ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ ಬೆನ್ನಲ್ಲೇ ಅವರನ್ನು ಭಾನುವಾರ ರಾತ್ರಿ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಯಿತು.
ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವಹಿಸಿದ್ದು, ಇಂದು ಬಾಡಿ ವಾರಂಟ್ ಮೇಲೆ ತನಿಖಾಧಿಕಾರಿಗಳು ಸೂರಜ್ ಅವರನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಭಾನುವಾರ ಜೈಲಿಗೆ ತಲುಪುವುದು ತಡವಾದ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣಗೆ ಸೋಮವಾರ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ನೀಡಲಿದ್ದಾರೆ. ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಸೂರಜ್ ಅವರನ್ನು ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಯುವಕನಿಗೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377 (ಅಸಹಜ ಲೈಂಗಿಕ ದೌರ್ಜನ್ಯ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿತ್ತು. ಅಸಹಜ ಲೈಂಗಿಕ ದೌರ್ಜನ್ಯ ಆರೋಪಿಸಿ ಜೆಡಿಎಸ್ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದರು. ತನ್ನ ಮೇಲೆ ಹೊಳೆನರಸೀಪುರದ ಗನ್ನಿಕಂಡದ ಫಾರ್ಮ್‌ಹೌಸ್‌ನಲ್ಲಿ ಜೂನ್ 16ರ ಸಂಜೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಸೂರಜ್ ರೇವಣ್ಣ ಅವರನ್ನು ವಿಚಾರಣೆ ನಡೆಸಿದ ಹಾಸನದ ಸೆನ್ ಠಾಣೆ ಪೊಲೀಸರು, ಬಳಿಕ ಬಂಧಿಸಿದ್ದರು. ತದನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಸಿಐಡಿಗೆ ವಹಿಸಿ ರಾಜ್ಯ ಕಾನೂನು – ಸುವ್ಯವಸ್ಥೆಯ ಎಡಿಜಿಪಿ ಆರ್.ಹಿತೇಂದ್ರ ಅವರು ಆದೇಶಿಸಿದ್ದರು. ಭಾನುವಾರ ಹಾಸನದಲ್ಲಿ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ಸೂರಜ್ ಅವರನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.