ಮನೆ ಅಪರಾಧ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್​: ಸ್ಥಳಕ್ಕೆ ಪೊಲೀಸರು ದೌಡು

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್​: ಸ್ಥಳಕ್ಕೆ ಪೊಲೀಸರು ದೌಡು

0

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದ್ದು, ​ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ದೌಡಾಯಿಸಿದ್ದಾರೆ.

Join Our Whatsapp Group

ವಿಮಾನ ನಿಲ್ದಾಣದ ಎಲ್ಲ ಸ್ಥಳಗಳಲ್ಲಿ ಮತ್ತು ಪ್ರಯಾಣಿಕರ ಬ್ಯಾಗ್​​ಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದಾದ ಬಳಿಕವೂ ಕೆಲವು ಬಾರಿ ಹುಸಿ ಬಾಂಬ್ ದಾಳಿ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.