ಮನೆ ರಾಜ್ಯ ಬಿಬಿಎಂಪಿ ಕಮೀಷನರ್ ತುಷಾರ್ ಗಿರಿನಾಥ್’​ಗೆ ಡೆಂಗ್ಯೂ: ಮನೆಯಲ್ಲೇ ಚಿಕಿತ್ಸೆ

ಬಿಬಿಎಂಪಿ ಕಮೀಷನರ್ ತುಷಾರ್ ಗಿರಿನಾಥ್’​ಗೆ ಡೆಂಗ್ಯೂ: ಮನೆಯಲ್ಲೇ ಚಿಕಿತ್ಸೆ

0

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲೀಕೆ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡೆಂಗ್ಯೂ ರೋಗ ಕಾಣಿಸಿಕೊಂಡಿದೆ. ನಾಲ್ಕು ದಿನಗಳಲ್ಲಿ ರಜೆಯಲ್ಲಿರುವ ಆಯುಕ್ತರು, ಮನೆಯಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ.

Join Our Whatsapp Group

ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಜೂನ್​ 22ರವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಪತ್ತೆ ಆಗಿದ್ದವು. ಡೆಂಗ್ಯೂ ಹಾವಳಿಗೆ ಜನರು ಹೈರಾಣಾಗಿದ್ದು, ರಾಜಧಾನಿಯಲ್ಲಿ ಜ್ವರ, ನೆಗಡಿ ಹೆಚ್ಚಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ 1,230 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದವು. ರಾಜ್ಯದಲ್ಲಿ ಜನವರಿಯಿಂದ 3975 ಕೇಸ್ ಪತ್ತೆ ಆಗಿದ್ದು, ಜೂನ್ ತಿಂಗಳಿನಿಂದ ಕೇಸ್​ಗಳ ಸಂಖ್ಯೆ ಏರಿಕೆ ಕಂಡಿದೆ.

ರಾಜ್ಯದಲ್ಲಿ 37144 ಜನರ ರಕ್ತ ಮಾದರಿ ಪಡೆಯಲಾಗಿತ್ತು. ಇದರಲ್ಲಿ 3957 ಜನರಿಗೆ ಪಾಸಿಟಿವ್ ಬಂದಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ 4063 ಜನರ ಸ್ಯಾಂಪಲ್ಸ್ ಸಂಗ್ರಹ ಮಾಡಲಾಗಿದ್ದು, ಈ ಪೈಕಿ 1230 ಜನರಲ್ಲಿ ಡೆಂಗ್ಯೂ ಪಾಸಿಟಿವ್​ ಕಾಣಿಸಿಕೊಂಡಿತ್ತು. ಇಲ್ಲಿಯವರೆಗೆ ಒಟ್ಟು 5187 ಡೆಂಘಿ ಕೇಸ್ ಪತ್ತೆ ಆಗಿದ್ದವು.

ಡೆಂಗ್ಯೂ ಕೇಸ್​​ಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಹಾವೇರಿ ಇದ್ದು, 389 ಪ್ರಕರಣ ಪತ್ತೆಯಾಗಿವೆ. 12 ಜನರಿಗೆ ಚಿಕಿತ್ಸೆ ಮುಂದುವರೆದಿತ್ತು. ಮೈಸೂರಿನಲ್ಲಿ 358, ಚಿಕ್ಕಮಗಳೂರಲ್ಲಿ 346, ಕಲಬುರಗಿಯಲ್ಲಿ 153 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದವು. ರಾಜ್ಯದಲ್ಲಿ ಅತೀ ಕಡಿಮೆ ಅಂದರೆ, ಯಾದಗಿರಿಯಲ್ಲಿ ಕೇವಲ 4 ಪ್ರಕರಣಗಳು ಮಾತ್ರ ಕಂಡು ಬಂದಿದ್ದವು.