ಮನೆ ಸ್ಥಳೀಯ ನೀಟ್ ಪರೀಕ್ಷೆ ರದ್ದುಗೊಳಿಸಿ CET ಜಾರಿಗೆ ಒತ್ತಾಯಿಸಿ ಎಸ್ ಎಫ್ ಐ ಪ್ರತಿಭಟನೆ

ನೀಟ್ ಪರೀಕ್ಷೆ ರದ್ದುಗೊಳಿಸಿ CET ಜಾರಿಗೆ ಒತ್ತಾಯಿಸಿ ಎಸ್ ಎಫ್ ಐ ಪ್ರತಿಭಟನೆ

0

ಮೈಸೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇದರಲ್ಲಿ ಭಾಗಿಯಾದವರ ಪಾತ್ರದ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಒತ್ತಾಯಿಸಿ, ನೀಟ್ ಪರೀಕ್ಷೆ ರದ್ದುಗೊಳಿಸಿ CET ಜಾರಿಗೆ ಒತ್ತಾಯಿಸಿ ಇಂದು ಭಾರತ ವಿದ್ಯಾರ್ಥಿ ಫೆಡರೇಶನ್ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಮೈಸೂರು ವಿವಿಯ ಕುವೆಂಪು ಪುತ್ತಳಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

Join Our Whatsapp Group

ಈ ಸಂದರ್ಭದಲ್ಲಿ ಎಸ್ ಎಫ್ ಐ ಅಖಿಲ ಭಾರತ ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯಣ್ ಮತ್ತು ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್ , ಜಿಲ್ಲಾ ಕಾರ್ಯದರ್ಶಿ ಅಭಿ ಡಿ, ಮುಖಂಡರಾದ ಚಿರಾಗ್ ಎಸ್ ಕೆ, ಪ್ರಜ್ವಲ್, ಮೇಘ ಶ್ರೀ, ಭಾರತ್ ಮತ್ತು ಹಲವು ಕಾರ್ಯಕರ್ತರು ಭಾಗವಹಿಸಿದ್ದರು.