ಪತ್ನಿಗೆ ಹೆರಿಗೆಯಾಗುತ್ತಿದ್ದಂತೆ ವ್ಯಕ್ತಿಯೊಬ್ಬ ಅವಳಿ ಹೆಣ್ಣು ಶಿಶುಗಳನ್ನು ಕದ್ದೊಯ್ದು, ಕೊಲೆ ಮಾಡಿ ಹೂತು ಹಾಕಿರುವ ಹೃದಯ ವಿದ್ರಾವಕ ಘಟನೆ ದೆಹಲಿಯಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಗಂಡು ಮಗು ಹುಟ್ಟಲಿಲ್ಲ ಎನ್ನುವ ಕಾರಣ ಎರಡು ಶಿಶುಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ವಿಚಾರದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು ಆರೋಪಿ ನೀರಜ್ ಸೋಲಂಕಿ ಪರಾರಿಯಾಗಿದ್ದಾನೆ, ಮತ್ತು ಮಕ್ಕಳ ಅಜ್ಜನನ್ನು ಕೂಡ ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ. ಪೂಜಾ ಎಂಬ ಮಹಿಳೆ ಹರ್ಯಾಣದ ರೋಹ್ಟಕ್ನಲ್ಲಿ ಅವಳಿ ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಗೊಂಡ ನಂತರ ಆಕೆಯ ಪತಿ ನೀರಜ್ ಶಿಶುಗಳನ್ನು ಕದ್ದೊಯ್ದಿದ್ದ ಎನ್ನಲಾಗಿದೆ.
ಜೂನ್ 1 ರಂದು ಆಸ್ಪತ್ರೆಯಿಂದ ಮನೆಗೆ ಹೊರಟಿದ್ದರು, ತಾನು ಮಕ್ಕಳೊಂದಿಗೆ ಬೇರೆ ಕಾರಿನಲ್ಲಿ ಬರುವುದಾಗಿ ಹೇಳಿ ಪತ್ನಿಯನ್ನು ಮನೆಗೆ ಕಳುಹಿಸಿ ಈ ದುಷ್ಕೃತ್ಯವೆಸಗಿದ್ದಾರೆ. ಎರಡು ದಿನಗಳ ನಂತರ ದೆಹಲಿಯ ಹೊರಭಾಗದ ಪೂತ್ ಕಲಾನ್‌ನಲ್ಲಿ ಶಿಶುಗಳನ್ನು ಹೂಳಲಾಗಿದೆ ಎನ್ನುವ ವಿಚಾರ ತಿಳಿದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.
2022ರಲ್ಲಿ ಪೂಜಾ ನೀರಜ್ ಎಂಬುವವನನ್ನು ವಿವಾಹವಾಗಿದ್ದರು, ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು, ಗಂಡು ಮಗುವನ್ನೇ ಹೆರಬೇಕು ಎಂದು ಒತ್ತಡ ಹೇರುತ್ತಿದ್ದರು ಎಂದು ತಿಳಿಸಿದ್ದಾರೆ. ಪೊಲೀಸರು ಜೂನ್ 5 ರಂದು ಎರಡು ಶಿಶುಗಳನ್ನು ಮಣ್ಣಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.