ಕೇರಳದ ಕೊಚ್ಚಿಯಿಂದ ಲಂಡನ್ಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಬಂದಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆದರಿಕೆ ಕರೆ ಮಾಡಿದ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ವಿಮಾನದ ಮೇಲೆ ವ್ಯಾಪಕ ತಪಾಸಣೆ ನಡೆಸಿದ್ದು, ಯಾವುದೇ ಅಪಾಯಕಾರಿ ವಸ್ತುಗಳು ಕಂಡುಬಂದಿಲ್ಲ. ಕೊಚ್ಚಿಯಿಂದ ಲಂಡನ್ಗೆ ಹಾರಲು ಸಿದ್ಧತೆ ನಡೆಸಿದ್ದ ಏರ್ ಇಂಡಿಯಾ 149 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಕೊಚ್ಚಿ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ತಪಾಸಣೆ ನಡೆಸಲಾಯಿತು. ಏರ್‌ಪೋರ್ಟ್ ಸೆಕ್ಯುರಿಟಿ ಗ್ರೂಪ್ (ASG-CISF), ಏರ್‌ಲೈನ್ ಭದ್ರತಾ ಸಿಬ್ಬಂದಿ ಮತ್ತು ಇನ್‌ಲೈನ್ ಬ್ಯಾಗೇಜ್ ಸ್ಕ್ರೀನಿಂಗ್ ಸಿಸ್ಟಮ್ ಗಳಿಂದ ಸಂಪೂರ್ಣ ಭದ್ರತಾ ತಪಾಸಣೆಗಳನ್ನು ನಡೆಸಲಾಯಿತು.
ವಿಮಾನವನ್ನು ಪ್ರತ್ಯೇಕವಾದ ವಿಮಾನ ಪಾರ್ಕಿಂಗ್ ಪಾಯಿಂಟ್‌ಗೆ ಸ್ಥಳಾಂತರಿಸಲಾಯಿತು ಮತ್ತು ಸಮಗ್ರ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು.ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಯಿತು ಮತ್ತು ನಂತರ ಹಾರಾಟಕ್ಕೆ ಅವಕಾಶ ಮಾಡಿಕೊಡಲಾಯಿತು.
ಮಲಪ್ಪುರಂ ಜಿಲ್ಲೆಯ ಕೊಂಡೊಟ್ಟಿ ಮೂಲದ ಸುಹೈಬ್ ಕರೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದ್ದು ಅವರನ್ನು ಬಂಧಿಸಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.