ಮನೆ ಅಪರಾಧ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಇ-ಮೇಲ್‌

ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಇ-ಮೇಲ್‌

0

ಹುಬ್ಬಳ್ಳಿ: ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆಯ ಇ-ಮೇಲ್‌ ಬಂದಿದೆ.

Join Our Whatsapp Group

ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್​​​​ ಕುಮಾರ್​​​​ಗೆ ವ್ಯಕ್ತಿಯೊಬ್ಬನಿಂದ ಇ-ಮೇಲ್​ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ.

ಲಾಂಗ್​ ಲೀವ್​​​​ ಪ್ಯಾಲೆಸ್ತೇನ್​​​​ ಎಂಬ ಹೆಸರಿನ ಮೇಲ್​ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ. ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಸಂದೇಶ ಬಂದ ತಕ್ಷಣವೇ ರೂಪೇಶ್ ಅವರು ಈ ವಿಚಾರವನ್ನು ಟರ್ಮಿನಲ್ ಉಸ್ತುವಾರಿ ಪ್ರತಾಪ್ ಅವರ ಗಮನಕ್ಕೆ ತಂದಿದ್ದಾರೆ.

ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಿದ್ದು ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.

ಈ ಕುರಿತು ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.