ಮನೆ ರಾಷ್ಟ್ರೀಯ ನೀಟ್ ಪರೀಕ್ಷೆ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಿ: ರಾಹುಲ್ ಗಾಂಧಿ

ನೀಟ್ ಪರೀಕ್ಷೆ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಿ: ರಾಹುಲ್ ಗಾಂಧಿ

0

ನವದೆಹಲಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದರು.

Join Our Whatsapp Group

ಸಂಸತ್ತಿನ ಸಂಕೀರ್ಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮ ಬಹಳ ಗಂಭೀರವಾದ ವಿಷಯವಾಗಿದೆ. ಎಲ್ಲಕ್ಕಿಂತ ಮೊದಲು ಅದರ ಬಗ್ಗೆ ಚರ್ಚೆ ನಡೆಸುವಂತೆ ವಿರೋಧ ಪಕ್ಷಗಳು ಆಗ್ರಹಿಸಿವೆ ಎಂದು ಹೇಳಿದರು.

ಇದು ಯುವಕರಿಗೆ ಸಂಬಂಧಿಸಿದ ವಿಷಯವಾಗಿದೆ. ಹಾಗಾಗಿ ಸಂಸತ್ತಿನಲ್ಲಿ ನೀಟ್‌ ವಿಷಯಕ್ಕೆ ಸಂಪೂರ್ಣ ದಿನವನ್ನು ಮೀಸಲಿಡಬೇಕು ಎಂದು ಅವರು ಆಗ್ರಹಿಸಿದರು.