ಮನೆ ರಾಷ್ಟ್ರೀಯ ದೆಹಲಿಯಲ್ಲಿ ಧಾರಾಕಾರಾ ಮಳೆ: ವಿಮಾನ ಸಂಚಾರದಲ್ಲಿ ವ್ಯತ್ಯಯ

ದೆಹಲಿಯಲ್ಲಿ ಧಾರಾಕಾರಾ ಮಳೆ: ವಿಮಾನ ಸಂಚಾರದಲ್ಲಿ ವ್ಯತ್ಯಯ

0

ನವದೆಹಲಿ (New Delhi)-ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಸಂಚಾರಕ್ಕೆ ತೊಡಕಾಗಿದೆ. ವಿಮಾನ ಸಂಚಾರದಲ್ಲೂ ವ್ಯತ್ಯಯವಾಗಿದೆ.

ಪ್ರತಿಕೂಲ ಹವಾಮಾನದ ಕಾರಣ ವಿಮಾನ ನಿಲ್ದಾಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ವಿಮಾನ ಸಂಚಾರದ ಕೊನೆ ಕ್ಷಣದ ಮಾಹಿತಿಗಾಗಿ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳ ಜತೆ ಸಂಪರ್ಕದಲ್ಲಿರಿ ಎಂದು ದೆಹಲಿ ವಿಮಾನ ನಿಲ್ದಾಣ ಟ್ವೀಟ್ ಮಾಡಿದೆ.

ಗಾಜಿಯಾಬಾದ್, ಹಿಂಡಾನ್ ವಾಯುನೆಲೆ, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುಂದುವರಿಯಲಿದೆ ಎಂದು ಸೋಮವಾರ ಮುಂಜಾನೆ ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.

ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಹಲವೆಡೆ ಮರಗಳು ಧರೆಗುರುಳಿದೆ. ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ.