ಮನೆ ಅಪರಾಧ ಶಿವಮೊಗ್ಗ: ಕಾರುಗಳ ಮುಖಾಮುಖಿ ಡಿಕ್ಕಿ- ಮೂವರು ಸಾವು

ಶಿವಮೊಗ್ಗ: ಕಾರುಗಳ ಮುಖಾಮುಖಿ ಡಿಕ್ಕಿ- ಮೂವರು ಸಾವು

0

ಶಿವಮೊಗ್ಗ: ಇಲ್ಲಿನ ಮುದ್ದಿನಕೊಪ್ಪ ಲಯನ್‌ ಸಫಾರಿ ಬಳಿ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮೂರು ಮಂದಿ ಸಾವಿಗೀಡಾಗಿದ್ದಾರೆ.

Join Our Whatsapp Group

ಶಿವಮೊಗ್ಗದಿಂದ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಸ್ವಿಫ್ಟ್‌ ಕಾರು ನಡುವೆ ಅಪಘಾತ ಸಂಭವಿಸಿದೆ‌.

ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಘಟನೆಯಲ್ಲಿ ಎರಡು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನ ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.