ಹಾವೇರಿ: ಜ್ವರದಿಂದ ಬಳಲುತ್ತಿದ್ದ ರಾಣೇಬೆನ್ನೂರ ತಾಲೂಕಿನ ಚಳಗೇರಿ ಗ್ರಾಮದ ಬಾಲಕ ಸಾವನ್ನಪ್ಪಿದ್ದು, ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ.
ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಧನುಷ ಅಡಿವೆಪ್ಪ ಹೊನ್ನಕ್ಕಳವರ ಎಂಬ ಬಾಲಕ ಮೃತಪಟ್ಟಿದ್ದಾನೆ.
ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಬಾಲಕನ ಸಾವಿನಿಂದ ಗ್ರಾಮದ ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಸ್ಥಳಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಿದ್ದಾರೆ.