ಮನೆ ಅಪರಾಧ ನವವಿವಾಹತೆಯ ಶವ ಪತ್ತೆ: ಪತಿ ವಿರುದ್ಧ ಕೊಲೆ ಆರೋಪ

ನವವಿವಾಹತೆಯ ಶವ ಪತ್ತೆ: ಪತಿ ವಿರುದ್ಧ ಕೊಲೆ ಆರೋಪ

0

ಕಲಬುರಗಿ: ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆಯ ಶವ ಪತಿ ಮನೆಯಲ್ಲಿ ಪತ್ತೆ ಆಗಿರುವಂತಹ ಘಟನೆ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.

Join Our Whatsapp Group

ಅವರಾದ(ಬಿ) ಗ್ರಾಮದ ನವವಿವಾಹತೆ ರಂಜಿತಾ(25) ಮೃತ ನವವಿವಾಹಿತೆ.

ಪತಿ ಉಮೇಶ್ ಕಟ್ಟಿಮನಿ ವಿರುದ್ಧ ಮೃತ ರಂಜಿತಾ ಕುಟುಂಬದವರಿಂದ ಕೊಲೆ ಆರೋಪ ಮಾಡಿದ್ದಾರೆ. ಉಮೇಶ್ ನೀರಾವರಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್​ ಆಗಿದ್ದು, 5 ತಿಂಗಳ ಹಿಂದೆಯಷ್ಟೇ ಮದುವೆ ಆಗಿತ್ತು.

ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಸದ್ಯ ರಂಜಿತಾ ಪತಿ, ಅತ್ತೆ, ಮಾವನನ್ನ ಪೊಲೀಸರು‌ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿಯ ಸ್ಟೇಷನ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.