ಮನೆ ಅಪರಾಧ ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಮಾರಾಟ: ವಿದ್ಯಾರ್ಥಿಗಳ ಬಂಧನ

ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಮಾರಾಟ: ವಿದ್ಯಾರ್ಥಿಗಳ ಬಂಧನ

0

ಬೆಂಗಳೂರು(Bengaluru): ಐಷಾರಾಮಿ ಜೀವನಕ್ಕಾಗಿ ಕಾಲೇಜು ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮನೋರಂಜಿತ್ ಸೇರಿ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ.  ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಐಷಾರಾಮಿ ಜೀವನಕ್ಕಾಗಿ ಕಾಲೇಜುಗಳ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಬಂಧಿತರಿಂದ ವಿವಿಧ ಬಗೆಯ ಡ್ರಗ್ಸ್ ಮೊಬೈಲ್, ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಿರಿನಗರ ಠಾಣಾ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.