ಮನೆ ಅಪರಾಧ ನಡುರಸ್ತೆಯಲ್ಲೇ ಹೊತ್ತಿ ಉರಿದ 30 ಜನ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​

ನಡುರಸ್ತೆಯಲ್ಲೇ ಹೊತ್ತಿ ಉರಿದ 30 ಜನ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​

0

ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಹೊತ್ತಿ ಉರಿದಿರುವ ಘಟನೆ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ.

Join Our Whatsapp Group

ಬಸ್ ​ನಲ್ಲಿ 30 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬಿಎಂಟಿಸಿ ಬಸ್​ ರೋಸ್​ ಗಾರ್ಡನ್​ನಿಂದ ಶಿವಾಜಿನಗರಕ್ಕೆ ಬರುತ್ತಿತ್ತು. ಮಾರ್ಗ ಮಧ್ಯೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್​ನಲ್ಲಿ ಚಾಲಕ ಬಸ್ ಬಂದ್​ ಮಾಡಿದ್ದರು. ಮತ್ತೆ ಸ್ಟಾರ್ಟ್ ಆಗಿಲ್ಲ. 2-3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಟಾರ್ಟ್​ ಆಗಲಿಲ್ಲ. ಈ ವೇಳೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಭಸ್ಮವಾಗಿದೆ.