ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕಂದಾಯ, ಪೊಲೀಸ್, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು ಎಂದು ಎಚ್ಚರಿಕೆ ನೀಡಿದರು.
ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ, ಟ್ರಾಮಾ ಸೆಂಟರ್ ನೆಟ್‌ವರ್ಕ್ ಮಾಡಬೇಕು ಎಂದರು.